Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:3 - ಕನ್ನಡ ಸಮಕಾಲಿಕ ಅನುವಾದ

3 ಎಣ್ಣೆಯ ಪಾತ್ರೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನಿಗೆ, ‘ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂಬುದಾಗಿ ಹೇಳು. ಅನಂತರ ಕದವನ್ನು ತೆರೆದು ತಡಮಾಡದೆ ಓಡಿಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತರುವಾಯ ಕುಪ್ಪಿಯಲ್ಲಿರುವ ಈ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, ‘ನಾನು ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆಂದು ಸರ್ವೇಶ್ವರ ನುಡಿದಿದ್ದಾರೆ,’ ಎಂಬುದಾಗಿ ಹೇಳಿ ಕೂಡಲೆ ಬಾಗಿಲು ತೆರೆದು ಓಡಿಹೋಗು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು - ನಾನು ನಿನ್ನನ್ನು ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳಿ ಕೂಡಲೆ ಕದತೆರೆದು ಓಡಿಹೋಗು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಹುವಿನ ತಲೆಯ ಮೇಲೆ ಈ ಸಣ್ಣ ಸೀಸೆಯಲ್ಲಿರುವ ಎಣ್ಣೆಯನ್ನು ಸುರಿದುಬಿಡು. ನಂತರ ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಿದ್ದೇನೆ!’ ಎಂದು ಹೇಳು. ಆ ಬಳಿಕ ಬಾಗಿಲನ್ನು ತೆಗೆದು ಓಡಿಬಿಡು. ಅಲ್ಲಿ ಇರಬೇಡ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:3
23 ತಿಳಿವುಗಳ ಹೋಲಿಕೆ  

ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.


ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.


ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.


ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು.


ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,


ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ?


ಸಮುಯೇಲನು ಸೌಲನಿಗೆ, “ಯೆಹೋವ ದೇವರು ತಮ್ಮ ಜನರಾದ ಇಸ್ರಾಯೇಲರ ಮೇಲೆ ನಿನ್ನನ್ನು ಅರಸನಾಗಿರಲು ಅಭಿಷೇಕಿಸಲು ನನ್ನನ್ನು ಕಳುಹಿಸಿದರು. ಈಗ ನೀನು ಯೆಹೋವ ದೇವರ ಮಾತುಗಳನ್ನು ಕೇಳು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.


ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.


ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು