30 ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.
30 ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಕೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.
ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.
“ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”
ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.