Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:32 - ಕನ್ನಡ ಸಮಕಾಲಿಕ ಅನುವಾದ

32 ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ - ಅಲ್ಲಿ ನನ್ನ ಪಕ್ಷದವರು ಯಾರು ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಹು ಕಿಟಕಿಯ ಕಡೆ ಮೇಲೆ ನೋಡಿದನು. ಅವನು, “ನನ್ನ ಪಕ್ಷದಲ್ಲಿರುವವರು ಯಾರು? ಯಾರಿದ್ದೀರಿ?” ಎಂದನು. ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಯೇಹುವಿನತ್ತ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:32
13 ತಿಳಿವುಗಳ ಹೋಲಿಕೆ  

ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?


ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.


ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.


ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.


ಪ್ರತಿ ಪಟ್ಟಣದಲ್ಲಿ ಖೇಡ್ಯಗಳನ್ನೂ, ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾಮೀನವರು ಅವನ ಕಡೆ ಇದ್ದುದರಿಂದ, ಅವುಗಳನ್ನು ಭದ್ರಪಡಿಸಿದನು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು.


ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು.


ಯೇಹುವು ಬಾಗಿಲಲ್ಲಿ ಪ್ರವೇಶಿಸಿದಾಗ ಅವಳು, “ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೋ?” ಎಂದಳು.


ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.


ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು