Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:33 - ಕನ್ನಡ ಸಮಕಾಲಿಕ ಅನುವಾದ

33 ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ,” ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತ ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಅವರಿಗೆ - ಆಕೆಯನ್ನು ಕೆಳಗೆ ದೊಬ್ಬಿರಿ ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತವು ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:33
13 ತಿಳಿವುಗಳ ಹೋಲಿಕೆ  

ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.


ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.


ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.


ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.


ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.


ಆಗ ಅವನ ಪಟ್ಟಣದ ಮನುಷ್ಯರೂ, ಅವನ ಪಟ್ಟಣದ ನಿವಾಸಿಗಳೂ ಆದ ಹಿರಿಯರೂ, ಗೌರವಸ್ಥರೂ, ಈಜೆಬೆಲಳು ಅವರಿಗೆ ಕಳುಹಿಸಿದ ಪ್ರಕಾರವೂ, ಅವಳು ಅವರ ಬಳಿಗೆ ಕಳುಹಿಸಿದ ಪತ್ರಗಳಲ್ಲಿ ಬರೆದ ಪ್ರಕಾರವೂ ಮಾಡಿದರು.


ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.


ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.


ಕಾಲು, ಬಡವರ ಕಾಲುಗಳೂ, ದೀನರ ಪಾದಗಳೂ ಅದನ್ನು ತುಳಿಯುವುವು.


ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು