Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:34 - ಕನ್ನಡ ಸಮಕಾಲಿಕ ಅನುವಾದ

34 ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅನಂತರ ಅವನು ಅರಮನೆಯೊಳಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ - ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿಕೊಂಡು ಸಮಾಧಿಮಾಡಿರಿ; ಆಕೆಯು ರಾಜಪುತ್ರಿಯಾಗಿರುತ್ತಾಳಷ್ಟೆ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಆ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:34
10 ತಿಳಿವುಗಳ ಹೋಲಿಕೆ  

ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ದಂತದ ಮಂಚಗಳ ಮೇಲೆ ಮಲಗಿಕೊಳ್ಳುತ್ತೀರಿ. ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿಕೊಳ್ಳುತ್ತೀರಿ. ಮಂದೆಯೊಳಗಿಂದ ಕುರಿಮರಿಗಳನ್ನೂ ಹಟ್ಟಿಯ ಮಂದೆಯೊಳಗಿಂದ ಕರುಗಳನ್ನೂ ತಿನ್ನುತ್ತೀರಿ.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.


ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.


ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.


ಅವರು ಅವಳನ್ನು ಹೂಳಿಡಲು ಹೋದಾಗ, ಅವಳ ತಲೆ ಬುರುಡೆಯೂ, ಕಾಲುಗಳೂ, ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಆದ್ದರಿಂದ ಅವರು ತಿರುಗಿಬಂದು ಅವನಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು