Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:35 - ಕನ್ನಡ ಸಮಕಾಲಿಕ ಅನುವಾದ

35 ಅವರು ಅವಳನ್ನು ಹೂಳಿಡಲು ಹೋದಾಗ, ಅವಳ ತಲೆ ಬುರುಡೆಯೂ, ಕಾಲುಗಳೂ, ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಆದ್ದರಿಂದ ಅವರು ತಿರುಗಿಬಂದು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸೇವಕರು ಶವವನ್ನು ಸಮಾಧಿಮಾಡುವದಕ್ಕಾಗಿ ಹೋದರು; ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಈಜೆಬೆಲಳನ್ನು ಸಮಾಧಿಮಾಡಲು ಜನರು ಹೋದರು. ಆದರೆ ಅವರಿಗೆ ಅವಳ ದೇಹವು ಸಿಗಲಿಲ್ಲ. ಅವರಿಗೆ ಅವಳ ತಲೆಬುರುಡೆ, ಕೈಕಾಲುಗಳು ಮಾತ್ರ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:35
9 ತಿಳಿವುಗಳ ಹೋಲಿಕೆ  

ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.


ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”


ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.


ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?


ಇದಲ್ಲದೆ ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳನ್ನು ತಿಂದುಬಿಡುವುವು; ಅವಳ ಶವವನ್ನು ಸಮಾಧಿಮಾಡಲು ಯಾವನೂ ಇರುವುದಿಲ್ಲ,” ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.


ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.


ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು