Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:5 - ಕನ್ನಡ ಸಮಕಾಲಿಕ ಅನುವಾದ

5 ಅವನು ಅಲ್ಲಿ ಸೇರಿದಾಗ, ಅಲ್ಲಿ ಯೇಹುವು ಮತ್ತು ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು, “ಅಧಿಪತಿಯೇ, ನಿನಗೊಂದು ಮಾತು ಹೇಳುವುದಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಅಧಿಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆಯಲ್ಲಿ ಕೂಡಿರುವುದನ್ನು ಕಂಡು, ಅವರನ್ನು ಸಮೀಪಿಸಿ, “ಸೇನಾಪತಿಯೇ, ನಿಮಗೊಂದು ಮಾತು ಹೇಳಬೇಕಾಗಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಸೇನಾಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆಯಲ್ಲಿ ಕೂಡಿರುವದನ್ನು ಕಂಡು ಅವರನ್ನು ಸಮೀಪಿಸಿ - ಸೇನಾಪತಿಯೇ, ನಿನಗೊಂದು ಮಾತು ಹೇಳುವದದೆ ಅಂದನು. ಯೇಹುವು ಅವನನ್ನು - ನಮ್ಮಲ್ಲಿ ಯಾರಿಗೆ ಎಂದು ಕೇಳಲು ಅವನು - ಸೇನಾಪತಿಯಾದ ನಿನಗೇ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ತರುಣನು ಅಲ್ಲಿಗೆ ಬಂದಾಗ ಸೇನಾಧಿಪತಿಗಳು ಕುಳಿತಿರುವುದನ್ನು ನೋಡಿ, “ಸೇನಾಧಿಪತಿಯೇ, ನಿನಗೆ ಒಂದು ಸಂದೇಶವಿದೆ” ಎಂದು ಹೇಳಿದನು. ಯೇಹುವು, “ನಾವೆಲ್ಲರೂ ಇಲ್ಲಿದ್ದೇವೆ. ನಮ್ಮಲ್ಲಿ ಸಂದೇಶವಿರುವುದು ಯಾರಿಗೆ?” ಎಂದು ಕೇಳಿದನು. ಆ ತರುಣನು, “ಸಂದೇಶವು ಸೇನಾಧಿಪತಿಯಾದ ನಿನಗೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:5
4 ತಿಳಿವುಗಳ ಹೋಲಿಕೆ  

ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಕ್ಕೆ ತಿರುಗಿ, ಅವನ ಬಳಿಗೆ ಬಂದು, “ಅರಸನೇ, ನಿನ್ನ ಸಂಗಡ ಹೇಳಬೇಕಾದ ರಹಸ್ಯವಾದ ಒಂದು ಮಾತು ಇದೆ,” ಎಂದನು. ಅವನು, “ನಿಶ್ಶಬ್ದ,” ಎಂದು ಹೇಳಿದಾಗ, ಅವನ ಬಳಿಯಲ್ಲಿ ನಿಂತಿದ್ದವರೆಲ್ಲರು ಅವನನ್ನು ಬಿಟ್ಟು ಹೊರಗೆ ಹೋದರು.


ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ಯೇಹುವನ್ನು ಅಲ್ಲಿ ಕಂಡು, ಒಳಗೆ ಪ್ರವೇಶಿಸಿ, ಅವನನ್ನು ಅವರ ಸಹೋದರರ ಮಧ್ಯದಿಂದ ಎಬ್ಬಿಸಿ, ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ,


ಹಾಗೆಯೇ ಯೌವನಸ್ಥನಾದ ಪ್ರವಾದಿಯು ಗಿಲ್ಯಾದಿನ ರಾಮೋತಿಗೆ ಹೋದನು.


ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು