Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:1 - ಕನ್ನಡ ಸಮಕಾಲಿಕ ಅನುವಾದ

1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲುನ್ ದೆವಾಚ್ಯಾ ಮನಾನ್ ಜೆಜು ಕ್ರಿಸ್ತಾಚೊ ಅಪೊಸ್ತಲ್ ಅನಿ ಅಮ್ಚ್ಯಾ ಭಾವಾ ತಿಮೊತಿನ್ ಕೊರಿಂಥ್ ಮನ್ತಲ್ಯಾ ಶಾರಾತ್ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಅನಿ ಅಖಾಯಿಯಾ ಮನ್ತಲ್ಯಾ ಪ್ರಾಂತ್ಯಾತ್ ಹೊತ್ತ್ಯಾ ಸಗ್ಳ್ಯಾ ದೆವಾಚ್ಯಾ ಲೊಕಾಕ್ನಿ ಲಿವ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:1
31 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ನಮಗೆ ರಕ್ಷಕ ಆಗಿರುವ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ,


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:


ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಅಖಾಯ ಪ್ರಾಂತದಲ್ಲಿರುವ ಯಾರೂ ಈ ನನ್ನ ಹೊಗಳಿಕೆಯನ್ನು ನಿಲ್ಲಿಸಲಾರರು ಎಂದು ಕ್ರಿಸ್ತ ಯೇಸುವಿನ ಸತ್ಯ ನನ್ನಲ್ಲಿ ಇರುವ ನಿಶ್ಚಯದಿಂದ ಹೇಳುತ್ತೇನೆ.


ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.


ಸ್ತೆಫನನ ಕುಟುಂಬದವರು ಅಖಾಯದಲ್ಲಿ ಪ್ರಥಮವಾಗಿ ವಿಶ್ವಾಸಿಗಳಾದವರು ಎಂಬುದನ್ನು ನೀವು ಬಲ್ಲಿರಿ. ಅವರು ದೇವಜನರಿಗೆ ಸೇವೆ ಮಾಡುವುದಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರಾಗಿದ್ದಾರೆ.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ನನ್ನ ಜೊತೆ ಕೆಲಸದವನಾಗಿರುವ ತಿಮೊಥೆಯನು ನಿಮಗೆ ವಂದನೆಗಳನ್ನು ತಿಳಿಸುತ್ತಾನೆ. ಹಾಗೆಯೇ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.


ಅವರ ಮನೆಯಲ್ಲಿ ಸೇರಿ ಬರುವ ಸಭೆಗೂ ನನ್ನ ವಂದನೆಗಳನ್ನು ತಿಳಿಸಿರಿ. ಏಷ್ಯಾ ಪ್ರಾಂತದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾಗಿರುವ ಎಪೈನೆತನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.


ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇದೆ. ಆಮೆನ್.


ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು