Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:11 - ಕನ್ನಡ ಸಮಕಾಲಿಕ ಅನುವಾದ

11 ನೀವು ನಿಮ್ಮ ಪ್ರಾರ್ಥನೆಯಿಂದ ನಮಗೆ ಸಹಾಯಮಾಡಿರಿ. ಹೀಗೆ, ಬಹಳ ಜನರ ಪ್ರಾರ್ಥನೆಗಳಿಗೆ ಉತ್ತರವಾಗಿ ನಮಗೆ ದೊರಕಿದ ಕೃಪೆಯ ಮೆಚ್ಚುಗೆಗಾಗಿ, ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ತುಮಿಬಿ ತುಮ್ಚ್ಯಾ ಮಾಗ್ನಿಚಿ ಮಜತ್ ಅಮ್ಕಾ ದಿವ್ಚೆ, ತನ್ನಾ ಎವ್ಡ್ಯಾ ಜನಾಂಚ್ಯಾ ಮಾಗ್ನ್ಯಾಚೊ ಫಳ್ ಹೊವ್ನ್, ಅಮ್ಕಾ ಗಾವಲ್ಲ್ಯಾ ಮಜತಿಸಾಟ್ನಿ ತೆಕಾ ಲೈ ಲೊಕಾ ತೆಕಾ ಧನ್ಯವಾದ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:11
15 ತಿಳಿವುಗಳ ಹೋಲಿಕೆ  

ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.


ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು.


ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.


ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು.


ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.


ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ.


ನಿಮಗೆ ದೊರೆತ ಮಿತಿಯಿಲ್ಲದ ದೇವರ ಕೃಪೆಯ ನಿಮಿತ್ತ, ಅವರು ನಿಮ್ಮನ್ನು ಕಾಣುವ ಬಯಕೆಯಿಂದ ನಿಮಗಾಗಿ ಪ್ರಾರ್ಥಿಸುವರು.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು