Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:12 - ಕನ್ನಡ ಸಮಕಾಲಿಕ ಅನುವಾದ

12 ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹ್ಯಾ ಎಕ್ ವಿಶಯಾತ್ ಅಮ್ಕಾ ಅಭಿಮಾನ್ ದಿಸ್ತಾ; ಸಗ್ಳ್ಯಾ ಮಾನ್ಸಾಂಚ್ಯಾ ಮದ್ದಿ ಅನಿ ವಿಶೆಸ್ ರಿತಿನ್ ತುಮ್ಚ್ಯಾ ಮದ್ದಿ ಬೊಲ್ತಾನಾ, ಅಮ್ಚಿ ಚಾಲ್ ಪ್ರಾಮಾನಿಕ್ ಅನಿ ದೆವಾಚ್ಯಾ ಭಿಂಯಾನ್ ಭರಲ್ಲಿ ಹಾಯ್ ಮನುನ್ ಅಮ್ಚೊ ಭುತ್ತುರ್ಲೊ ಮನ್ ಅಮ್ಕಾ ಸಾಕ್ಷಿ ದಿತಾ. ಜಗಾಚೆ ಶಾನ್‍ಪಾನ್ ನ್ಹಯ್, ದೆವಾಚಿ ಕುರ್ಪಾಚ್ ಅಮ್ಚ್ಯಾ ಹ್ಯಾ ಚಾಲಿಕ್ ಪ್ರೆರನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:12
40 ತಿಳಿವುಗಳ ಹೋಲಿಕೆ  

ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.


ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.


ಇದು ನಿಮಗೆ ನನ್ನ ಆಜ್ಞೆಯಲ್ಲ. ಆದರೆ ಇತರರಿಗೆ ನಿಮಗಿರುವ ಈ ಸೇವಾಕಾರ್ಯದ ಉತ್ಸಾಹವನ್ನೂ ನಮ್ಮ ಮೇಲಿರುವ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾಗಿದೆಯೆಂಬುದನ್ನೂ ಹೋಲಿಕೆಮಾಡಿ ಪರೀಕ್ಷಿಸಿನೋಡಲು ಬಯಸುತ್ತಿದ್ದೇನೆ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.


ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.


ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?


ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.


ನನ್ನ ಮನಸ್ಸಾಕ್ಷಿಯು ಶುದ್ಧವಾಗಿದೆ. ಆದರೆ ಅದು ನನ್ನನ್ನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯತೀರಿಸುವವರು ಕರ್ತದೇವರೇ,


ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.


ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ


ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.


ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು