Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:18 - ಕನ್ನಡ ಸಮಕಾಲಿಕ ಅನುವಾದ

18 ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎಂದಿಗೂ ಇಲ್ಲ, ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದ್ದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ವಿಶ್ವಾಸಿ ದೆವ್ ಕಶೆ ಬೊಲ್ತಾ ತಸೆಚ್ ಮಿಯಾ ಸಾಂಗ್ತಾ, ಅಮಿ ತುಮ್ಕಾ ದಿಲ್ಲಿ ಬಾತ್ಮಿ ಎಗ್ದಾ “ಹೊಯ್” ಅನಿ ತನ್ನಾಚ್ “ನ್ಹಯ್” ಮನ್ತಲಿ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:18
10 ತಿಳಿವುಗಳ ಹೋಲಿಕೆ  

ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.


ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.


ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು