Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:20 - ಕನ್ನಡ ಸಮಕಾಲಿಕ ಅನುವಾದ

20 ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ “ಹೌದು” ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ “ಆಮೆನ್” ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಶ್ಚಯವಾಗಿ ದೇವರ ವಾಗ್ದಾನಗಳು ಎಷ್ಟಿದ್ದರೂ ಕ್ರಿಸ್ತನಲ್ಲೇ ದೃಢವಾಗುತ್ತವೆ. ಆದಕಾರಣ ದೇವರ ಪ್ರಭಾವವು ಪ್ರಕಾಶವಾಗುವದಕ್ಕೋಸ್ಕರ ಆತನ ಮೂಲಕವಾಗಿ ನಾವು ಆಮೆನ್ ಎಂದು ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ದೆವಾನ್ ದಿಲ್ಲ್ಯಾ ಸಗ್ಳ್ಯಾ ಗೊಸ್ಟಿಯಾಬಿ ತೆಚೆ ವೈನಾ ಹೊಯ್ ಹೊಲ್ಯಾತ್. .ತಸೆ ಮನುನುಚ್ ದೆವಾಚಿ ಸುತ್ತಿ ಕರ್‍ತಾನಾ ತೆಚೆ ವೈನಾ ಅಮಿ “ತಸೆಚ್ ಹೊಂವ್ದಿ” ಮನ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:20
41 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ಆದರೆ ವಂಶಾವಳಿಯಲ್ಲಿ ಸೇರದೆ ಇರುವ ಮೆಲ್ಕಿಜೆದೇಕನು ಅಬ್ರಹಾಮನಿಂದ ದಶಮಭಾಗವನ್ನು ತೆಗೆದುಕೊಂಡದ್ದಲ್ಲದೆ, ವಾಗ್ದಾನಗಳನ್ನು ಪಡೆದಿದ್ದ ಅಬ್ರಹಾಮನನ್ನು ಆಶೀರ್ವದಿಸಿದನು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.


ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು