Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:9 - ಕನ್ನಡ ಸಮಕಾಲಿಕ ಅನುವಾದ

9 ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಮಟ್ಲ್ಯಾರ್ ಅಮ್ಕಾ ಮರನಾಚಿ ಶಿಕ್ಷಾ ಲಿವಲ್ಲಿ ಹಾಯ್ ಸರ್ಕೆ ಅಮ್ಕಾ ದಿಸ್ಲೆ, ಅಮಿ ಅಮ್ಚ್ಯಾ ವರ್ತಿ ನ್ಹಯ್, ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಥವ್ಕ್ ಅಮಿ ಶಿಕ್ತಲ್ಯಾಸಾಟಿ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:9
20 ತಿಳಿವುಗಳ ಹೋಲಿಕೆ  

ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು.


ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:


ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.


ಭೂಮಿಯ ಶ್ರೀಮಂತರೆಲ್ಲರು ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರು ಅವರ ಮುಂದೆ ಅಡ್ಡಬೀಳುವರು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


“ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.


ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”


ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು