Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:1 - ಕನ್ನಡ ಸಮಕಾಲಿಕ ಅನುವಾದ

1 ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಪಾವ್ಲು ಕ್ರಿಸ್ತಾಚ್ಯಾ ಶಾಂತ್ಪಾನಾನ್ ಅನಿ ಬೊಳೆಪಾನಾನ್ ತುಮ್ಚ್ಯಾಕ್ಡೆ ಎಕ್ ವಯಕ್ತಿಕ್ ಉಪ್ಕಾರ್ ಮಾಗ್ತಾ, .ಮಿಯಾ ತುಮಿ ಸಾಂಗ್ತ್ಯಾಶಿ ತಶೆ, ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಭಿವಲ್ಲೊ ಖರೆ ತುಮ್ಚ್ಯಾಕ್ನಾ ಧುರ್ ರ್‍ಹಾತಾನಾ ಖಟೊರ್ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:1
38 ತಿಳಿವುಗಳ ಹೋಲಿಕೆ  

“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ನನ್ನನ್ನು ಹೊಗಳಿಕೊಳ್ಳಬೇಕಾಗಿದ್ದರೆ, ನಾನು ನನ್ನ ಬಲಹೀನತೆಯಲ್ಲಿ ಹೊಗಳಿಕೊಳ್ಳುವೆನು.


ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದ ಬರೆದ ವಂದನೆಯಿದು. ನನ್ನ ಎಲ್ಲಾ ಪತ್ರಗಳಲ್ಲಿಯೂ ಇದೇ ಗುರುತು. ನಾನು ಹೀಗೆಯೇ ಬರೆಯುತ್ತೇನೆ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ.


ಈ ಅನುಭವಗಳನ್ನು ಕುರಿತು ನಾನು ಹೆಚ್ಚಳ ಪಡುವೆನು. ಆದರೆ ನನ್ನ ವಿಷಯದಲ್ಲಿ ಅಲ್ಲ; ನನ್ನ ಬಲಹೀನತೆ ವಿಷಯದಲ್ಲಿ ಮಾತ್ರ ನಾನು ಹೊಗಳಿಕೊಳ್ಳುವೆನು.


ಹೀಗೆಲ್ಲಾ ಮಾಡಲು ಬಹಳ ಬಲಹೀನರಾದ ನಮಗೆ ಸಾಧ್ಯವಿಲ್ಲ ಎಂದು ಒಪ್ಪಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ! ಯಾವುದನ್ನು ಇತರರು ಹೊಗಳಿಕೊಳ್ಳುವುದಕ್ಕೆ ಧೈರ್ಯ ಮಾಡುತ್ತಾರೋ, ಅದನ್ನು ನಾನು ಬುದ್ಧಿಹೀನನಂತೆ ಹೊಗಳುವ ಧೈರ್ಯ ಮಾಡುತ್ತೇನೆ.


ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.


ನಾನು ನಿಮ್ಮ ಬಳಿಗೆ ಬಂದಾಗ, ಕಠಿಣವಾಗಿ ವರ್ತಿಸಲು ನನಗೆ ಅವಕಾಶಕೊಡಬೇಡಿರಿ. ಏಕೆಂದರೆ ನಾವು ಪ್ರಾಪಂಚಿಕ ರೀತಿಗನುಸಾರವಾಗಿ ನಡೆಯುತ್ತಿದ್ದೇವೆಂದು ಆಕ್ಷೇಪಿಸುವ ಕೆಲವರ ವಿರುದ್ಧ ಖಂಡಿತವಾಗಿಯು ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.


ನಿಮ್ಮ ಮೇಲೆ ನನಗೆ ಪರಿಪೂರ್ಣ ಭರವಸೆ ಇದೆ. ನಿಮ್ಮ ಬಗ್ಗೆ ನಾನು ಹೆಮ್ಮೆಪಡುತ್ತೇನೆ. ನಾನು ಬಹಳವಾಗಿ ಪ್ರೋತ್ಸಾಹ ಹೊಂದಿ, ನಮಗೆ ಬಂದಿದ್ದ ಎಲ್ಲಾ ಸಂಕಟಗಳಲ್ಲಿ ನಾವು ನಿಮ್ಮಿಂದ ಮಿತಿಯಿಲ್ಲದಷ್ಟು ಆನಂದಪಡುತ್ತಿದ್ದೇನೆ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.


ನಾವು ಕ್ರಿಸ್ತ ಯೇಸುವಿನ ನಿಮಿತ್ತ ಮೂರ್ಖರಾಗಿದ್ದೇವೆ! ನೀವೋ ಕ್ರಿಸ್ತ ಯೇಸುವಿನಲ್ಲಿ ಬುದ್ಧಿವಂತರು, ನಾವೋ ಬಲಹೀನರು. ನೀವು ಬಲಿಷ್ಠರು, ನೀವು ಮಾನವಂತರು, ನಾವೋ ಮಾನಹೀನರು!


ನಾನು ನಿಮಗೆ ಕೆಲವು ವಿಷಯಗಳನ್ನು ಜ್ಞಾಪಕ ಪಡಿಸುವುದಕ್ಕಾಗಿ ಬಹಳ ಧೈರ್ಯದಿಂದ ಹೀಗೆ ಬರೆದಿದ್ದೇನೆ.


ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.


ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.


“ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.


ಶಿಸ್ತಿನ ಬೆತ್ತವನ್ನು ಹಿಡಿದು ಬಿಗಿಯಲು ನಿಮ್ಮ ಬಳಿ ಬರಲೋ? ಅಥವಾ ಪ್ರೀತಿ ಸೌಮ್ಯದಿಂದ ಬರಲೋ? ನಿಮಗೆ ಯಾವುದು ಇಷ್ಟ?


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು