Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:4 - ಕನ್ನಡ ಸಮಕಾಲಿಕ ಅನುವಾದ

4 ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರಪಂಚದವರು ಉಪಯೋಗಿಸುವ ಆಯುಧಗಳಿಗೆ ತದ್ವಿರುದ್ಧವಾದ ಆಯುಧಗಳೊಂದಿಗೆ ನಾವು ಹೋರಾಡುತ್ತೇವೆ. ನಮ್ಮ ಆಯುಧಗಳು ದೇವರ ಶಕ್ತಿಯನ್ನು ಹೊಂದಿವೆ. ಅವು ಶತ್ರುವಿನ ಬಲವಾದ ಕೋಟೆಗಳನ್ನು ನಾಶ ಮಾಡಬಲ್ಲವು. ನಾವು ಜನರ ವಾದಗಳನ್ನು ನಾಶಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಚ್ಯಾ ಮಾರಾಮಾರಿಚಿ ಹಾತಿಯಾರಾ ಹ್ಯಾ ಜಗಾತ್ಲ್ಯಾ ಸರ್ಕಿ ನ್ಹಯ್, ದೆವಾಚಿ ಹಾತಿಯಾರಾ ದೈವಿಕ್ ತಾಕತ್ ರ್‍ಹಾವ್ನ್ ಘಟ್ಮುಟ್ ಭಿತ್ತಿಯಾ ನಾಸ್ ಕರುಕ್ ಸಕ್ತಾತ್; ಸಗ್ಳ್ಯಾ ಝುಟ್ಯಾ ವಾದ್ ವಿವಾದಾಕ್ನಿ ಅಮಿ ನಾಸ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:4
28 ತಿಳಿವುಗಳ ಹೋಲಿಕೆ  

ಸತ್ಯಮಾತುಗಳಿಂದಲೂ, ದೇವರ ಶಕ್ತಿಯಿಂದಲೂ, ಎಡಬಲಗೈಗಳಲ್ಲಿ ನೀತಿಯ ಆಯುಧಗಳೂ


ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ನಿಮ್ಮ ನಂಬಿಕೆಯು ಮನುಷ್ಯ ಜ್ಞಾನದ ಮೇಲೆ ಅವಲಂಬಿಸದೆ ದೇವರ ಶಕ್ತಿಯ ಮೇಲೆ ಅವಲಂಬಿಸಬೇಕೆಂದು ನಾನು ಹೀಗೆ ಮಾಡಿದೆನು.


ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.


ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.


ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.


ಇಸ್ರಾಯೇಲರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ, ಅವು ಬಿದ್ದು ಹೋದದ್ದು ನಂಬಿಕೆಯಿಂದಲೇ.


ಆದ್ದರಿಂದ ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.


ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ. ನಿಮ್ಮ ಭಕ್ತಿವೃದ್ಧಿಮಾಡಲಿಕ್ಕೆ ಕರ್ತ ಯೇಸು ನಮಗೆ ಅಧಿಕಾರವನ್ನು ಕೊಟ್ಟಿದ್ದಾರೆ. ಈ ಅಧಿಕಾರದ ಬಗ್ಗೆ ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ನಾಚಿಕೆಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು