Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:1 - ಕನ್ನಡ ಸಮಕಾಲಿಕ ಅನುವಾದ

1 ನನ್ನ ಬುದ್ಧಿಹೀನತೆಯನ್ನು ನೀವು ಇನ್ನೂ ಸ್ವಲ್ಪ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಈಗಾಗಲೇ ನೀವು ಸಹಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ನನ್ನನ್ನು ಹೊಗಳಿಕೊಳ್ಳುವದರಲ್ಲಿ ಸ್ವಲ್ಪ ಬುದ್ಧಿಹೀನತೆಯಿಂದ ಮಾತಾಡುತ್ತೇನೆ; ನೀವು ಅದನ್ನು ಸಹಿಸಿಕೊಳ್ಳುತ್ತೀರೇನೋ. ನನ್ನನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಸ್ವಲ್ಪ ಬುದ್ಧಿಹೀನನಾಗಿರುವಾಗಲೂ ನೀವು ನನ್ನ ವಿಷಯದಲ್ಲಿ ತಾಳ್ಮೆಯಿಂದಿರಬೇಕೆಂದು ಅಪೇಕ್ಷಿಸುತ್ತೇನೆ. ಆದರೆ ನೀವು ಈಗಾಗಲೇ ನನ್ನ ವಿಷಯದಲ್ಲಿ ತಾಳ್ಮೆಯಿಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜೆ ಉಲ್ಲೆ ಪಿಶೆಪಾನ್ ತುಮಿ ಸೊಸುನ್ ಘೆಟ್ಲ್ಯಾಶಿ ಹೊಲ್ಯಾರ್ ದಯಾ ಕರುನ್ ಮಾಜೆ ಉಲ್ಲೆಶೆ ಸೊಸುನ್ ಘೆವ್ನ್ ಜಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:1
17 ತಿಳಿವುಗಳ ಹೋಲಿಕೆ  

ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಹೀಗೆಲ್ಲಾ ಮಾಡಲು ಬಹಳ ಬಲಹೀನರಾದ ನಮಗೆ ಸಾಧ್ಯವಿಲ್ಲ ಎಂದು ಒಪ್ಪಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ! ಯಾವುದನ್ನು ಇತರರು ಹೊಗಳಿಕೊಳ್ಳುವುದಕ್ಕೆ ಧೈರ್ಯ ಮಾಡುತ್ತಾರೋ, ಅದನ್ನು ನಾನು ಬುದ್ಧಿಹೀನನಂತೆ ಹೊಗಳುವ ಧೈರ್ಯ ಮಾಡುತ್ತೇನೆ.


ಬುದ್ಧಿಹೀನರನ್ನು ಹರ್ಷದಿಂದ ಸಹಿಸಿಕೊಳ್ಳುತ್ತಿರುವ ಬುದ್ಧಿವಂತರು ನೀವು!


ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.


ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ನಾವು ಕ್ರಿಸ್ತ ಯೇಸುವಿನ ನಿಮಿತ್ತ ಮೂರ್ಖರಾಗಿದ್ದೇವೆ! ನೀವೋ ಕ್ರಿಸ್ತ ಯೇಸುವಿನಲ್ಲಿ ಬುದ್ಧಿವಂತರು, ನಾವೋ ಬಲಹೀನರು. ನೀವು ಬಲಿಷ್ಠರು, ನೀವು ಮಾನವಂತರು, ನಾವೋ ಮಾನಹೀನರು!


ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?


ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.


ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.


ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು.


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.


ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು