Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:12 - ಕನ್ನಡ ಸಮಕಾಲಿಕ ಅನುವಾದ

12 ತಾವು ಮಾಡುವ ಕಾರ್ಯಗಳ ಬಗ್ಗೆ ನಮ್ಮೊಂದಿಗೆ ಸರಿಸಮಾನವೆಂದು ಹೊಗಳಿಕೊಳ್ಳಲು ಅವಕಾಶವನ್ನು ಹುಡುಕುವವರಿಗೆ, ಯಾವ ಆಸ್ಪದವೂ ಸಿಗದಂತೆ ನಾನು ಮಾಡುತ್ತಿರುವುದನ್ನು ನಿಲ್ಲಿಸದೆ, ಇನ್ನು ಮುಂದೆಯೂ ಮಾಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು. ಅವರು ಯಾವದರಲ್ಲಿ ಹಿಗ್ಗುತ್ತಾರೋ ಅದರಲ್ಲಿ ನಮ್ಮಂತೆಯೇ ನಡೆಯುವವರಾಗಿ ಕಂಡು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಆ ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಆ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅತ್ತಾ ಕಶೆ ಮಿಯಾ ರಾಬುಲಾ ತಸೆಚ್ ರಾಬುನ್ಗೆತ್ ರ್‍ಹಾತಾ .ಅನಿ ಅಪ್ನಿ ಪಾವ್ಲು ಸಾರ್ಕೆ ಮನುನ್ ದಾಕ್ವುನ್ ಮೊಟೆಪಾನ್ ಬೊಲುಕ್ ಅವಕಾಸ್ ಹುಡಕ್ತಲ್ಯಾಕ್ನಿ ತೊ ಗಾವಿನಸಿ ಸಾರ್ಕೆ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ಅಪ್ನಾಚ್ಯಾ ದರ್ಬಾರಾಚ್ಯಾ ಕಾಮಾತ್ನಿ ತೆನಿ ಅಮ್ಚ್ಯಾ ಸಾರ್ಕೆಚ್ ಮನುನ್ ಚಿಂತ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:12
13 ತಿಳಿವುಗಳ ಹೋಲಿಕೆ  

ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.


ಅನೇಕರು ಪ್ರಾಪಂಚಿಕ ವಿಷಯಗಳಲ್ಲಿ ತಮ್ಮನ್ನು ಹೊಗಳಿಕೊಳ್ಳುವಂತೆ ನಾನೂ ಹೊಗಳಿಕೊಳ್ಳುವೆನು.


ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.


ಆದರೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”


ಮತ್ತೊಮ್ಮೆ ನಮ್ಮನ್ನು ನಾವೇ ಹೊಗಳಿಕೊಳ್ಳುತ್ತೇವೆಂದು ನೀವು ಭಾವಿಸಬೇಡಿ. ನಮ್ಮನ್ನು ಕುರಿತು ನೀವು ಹೆಮ್ಮೆ ಪಡುವಂತೆ ಒಂದು ಅವಕಾಶವನ್ನು ನಾವು ನಿಮಗೆ ಒದಗಿಸುತ್ತೇವೆ ಅಷ್ಟೇ. ಹೀಗೆ ಮನುಷ್ಯರ ಹೃದಯವನ್ನಲ್ಲಾ, ಹೊರತೋರಿಕೆಯನ್ನು ಕಂಡು ಹೆಮ್ಮೆ ಪಡುವವರಿಗೆ ನೀವು ಉತ್ತರ ಕೊಡುವಿರಿ.


ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.


ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭವನ್ನು ಕಾಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು