Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:15 - ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಸೈತಾನನ ಸೇವಕರೂ ನೀತಿಯ ಸೇವಕರಂತೆ ಕಾಣಿಸಿಕೊಳ್ಳುವುದಕ್ಕೆ ತಮ್ಮನ್ನು ಮಾರ್ಪಡಿಸಿಕೊಳ್ಳುವುದು ಆಶ್ಚರ್ಯವೇನೂ ಅಲ್ಲ. ಅವರ ಕೃತ್ಯಗಳಿಗೆ ತಕ್ಕಂತೆ ಅವರಿಗೆ ಅಂತ್ಯವೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೀಗಿರುವಲ್ಲಿ, ಅವನ ಸೇವಕರೂ ಸಹ ಸತ್ಯಸೇವಕರಂತೆ ವೇಷಧಾರಿಗಳಾದರೆ ಅದರಲ್ಲೇನು ಸೋಜಿಗ? ಅವರ ಕೃತ್ಯಗಳಂತೆಯೇ ಅವರ ಅಂತ್ಯವೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸುವದಕ್ಕೆ ವೇಷಹಾಕಿಕೊಳ್ಳುವದು ದೊಡ್ಡದಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗಿರಲು ಸೈತಾನನ ಸೇವಕರು ತಾವು ಸರಿಯಾದ ಕೆಲಸವನ್ನು ಮಾಡುತ್ತಿರುವವರಂತೆ ನಟಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ ಅವರು ಮಾಡುತ್ತಿರುವ ಕೆಲಸಗಳ ಪ್ರತಿಫಲವಾಗಿ ಅವರಿಗೆ ಕೊನೆಯಲ್ಲಿ ದಂಡನೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ರ್‍ಹಾತಾನಾ, ತೆಚಿ ಸೆವಕಾಬಿ ನಿತಿವಂತ್ಪಾನಾಚ್ಯಾ ಸೆವಕಾಂಚೊ ವೆಸ್ ಘಾಲ್ತಾತ್ ಹೊಲ್ಯಾರ್ ಹ್ಯಾತುರ್ ಕಾಯ್ಬಿ ವಿಶೆಸ್ ನಾ. ಖರೆ ಕಾಮಾಂಚ್ಯಾ ಪರ್‍ಕಾರ್ ತೆಂಚೊ ಅಂತ್ ಬಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:15
30 ತಿಳಿವುಗಳ ಹೋಲಿಕೆ  

ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಅಂಥಾ ಜನರು ಸುಳ್ಳು ಅಪೊಸ್ತಲರು, ವಂಚಿಸುವ ವರ್ತಕರು, ಕ್ರಿಸ್ತ ಯೇಸುವಿನ ಅಪೊಸ್ತಲರೆಂದು ವೇಷ ಹಾಕಿಕೊಂಡವರೂ ಆಗಿದ್ದಾರೆ.


ನಾವು ನಿಮ್ಮಲ್ಲಿ ಆತ್ಮಿಕ ಸಂಗತಿಗಳನ್ನು ಬಿತ್ತಿದ ಮೇಲೆ, ನಿಮ್ಮಿಂದ ಭೌತಿಕ ಸುಗ್ಗಿಯನ್ನು ಕೊಯ್ಯುವುದು ದೊಡ್ಡದೋ?


ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು.


ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”


“ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು