Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:2 - ಕನ್ನಡ ಸಮಕಾಲಿಕ ಅನುವಾದ

2 ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮ್ಚ್ಯಾ ವಿಶಯಾತ್ ದೆವಾಕ್ ಹಾಯ್ ತಸ್ಲಿಚ್ ಉರ್ಬಾ ಮಾಕಾಬಿ ಹಾಯ್. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಕಾ ಎಕ್ ಘೊಮನ್ಸಾಕ್ಡೆ ಲಗಿನ್ ಕರುನ್ ದಿಲಾ, ಎಕ್ ಖರ್‍ಯಾ ಪವಿತ್ರ್ ನಿಂಬ್ಯಾ ಚೆಡ್ವಾಚ್ಯಾ ಸರ್ಕೆ ತುಮ್ಕಾ ಕ್ರಿಸ್ತಾಚಿ ಬಾಯ್ಕೊ ಕರುನ್ ದಿಲ್ಲೆ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:2
19 ತಿಳಿವುಗಳ ಹೋಲಿಕೆ  

ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.


ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ಸಂತಾನದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.


ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.


ಏಕೆಂದರೆ, ಕರ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರೇ, ನಮ್ಮನ್ನೂ ಸಹ ಯೇಸುವಿನೊಂದಿಗೆ ಎಬ್ಬಿಸಿ, ನಿಮ್ಮ ಜೊತೆಯಲ್ಲಿಯೂ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.


ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು