Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:20 - ಕನ್ನಡ ಸಮಕಾಲಿಕ ಅನುವಾದ

20 ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕೊನ್ ಬಿ ಎಕ್ಲೊ ತುಮ್ಕಾ ಗುಲಾಮ್ ಕರಿಲ್ ಜಾಲ್ಯಾರ್ ಅನಿ ಎಕ್ಲ್ಯಾನ್ ತುಮ್ಚೊ ಫಾಯ್ದೊ ಕಾಡ್ಲ್ಯಾರ್ ಎಕ್ಲೊ ಅಮ್ಕಾ ಕಿಳ್ ಕರುನ್ ಬಗ್ತಾ ಹೊಲ್ಯಾರ್, ತಿನ್ವೆಚೊ ಎಕ್ಲೊ ತುಮ್ಚ್ಯಾ ಗಾಲಾರ್ ಠಪ್ರಾಕ್ ಮಾರ್‍ಲ್ಯಾರ್, ತುಮಿ ಅಸ್ಲ್ಯಾ ಸಗ್ಳ್ಯಾತ್ನಿ ಕವ್ಡೆ ಸೊಸುನ್ ರ್‍ಹಾತ್ಯಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:20
19 ತಿಳಿವುಗಳ ಹೋಲಿಕೆ  

ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.


ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು.


ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ. ಅವನು ನಿಂದೆಯಿಂದಲೇ ತುಂಬಿರಲಿ.


ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.


ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.


ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.


ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಏನೇ ಇದ್ದರೂ, ನಾನು ನಿಮಗೆ ಭಾರವಾಗಿರಲಿಲ್ಲ; ನಾನು ಯುಕ್ತಿಯುಳ್ಳವನಾಗಿ ನಿಮ್ಮನ್ನು ಉಪಾಯದಿಂದ ಸುಲಿದುಕೊಂಡೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು