Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:23 - ಕನ್ನಡ ಸಮಕಾಲಿಕ ಅನುವಾದ

23 ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ಕ್ರಿಸ್ತಾಚಿ ಸೆವಕಾ? ಬುದ್ದನಸಲ್ಲ್ಯಾ ಮಾನ್ಸಾಚ್ಯಾ ಸರ್ಕೆ ಬೊಲುಲಾ ಸರ್ಕೆ ದಿಸುಕ್ ಲಾಗ್ಲಾ. ಮಿಯಾ ತೆಂಚ್ಯಾನ್ಕಿ ಜಾಸ್ತಿ ಕ್ರಿಸ್ತಾಚೊ ಸೆವಕ್, ತೆಂಚ್ಯಾನ್ಕಿ ಜಾಸ್ತಿ ಎಳಾ ಬಂದಿಖಾನ್ಯಾತ್ ಪಡ್ಲಾ; ಲೆಕ್ಕ್ ನಾ ತವ್ಡಿ ಮಾರಾ ಮಿಯಾ ಖಾಲಾ; ಕವ್ಡೆಂದಾಕಿ ಮರುನ್ ವಾಚ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:23
43 ತಿಳಿವುಗಳ ಹೋಲಿಕೆ  

ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


“ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ.


ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.


ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.


ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”


ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.


ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.


ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.


ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.


ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಆದ್ದರಿಂದ ನೀವು ಈ ರೀತಿಯಾಗಿ ನಮ್ಮನ್ನು ಪರಿಗಣಿಸಬೇಕು: ನಾವು ಕ್ರಿಸ್ತ ಯೇಸುವಿನ ದಾಸರೆಂತಲೂ ದೇವರ ರಹಸ್ಯಗಳ ನಂಬಿಗಸ್ತ ನಿರ್ವಾಹಕರೆಂದೂ ಪರಿಗಣಿಸಿರಿ.


ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು.


ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು