Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:29 - ಕನ್ನಡ ಸಮಕಾಲಿಕ ಅನುವಾದ

29 ನಿಮ್ಮಲ್ಲಿ ಯಾರಾದರೂ ಬಲಹೀನರಾಗಿದ್ದರೆ, ನಾನೂ ಬಲಹೀನನಾಗಿರುವುದಿಲ್ಲವೋ? ನಿಮ್ಮಲ್ಲಿ ಯಾವನಾದರೂ ಪಾಪದಲ್ಲಿ ಬಿದ್ದುಹೋದರೆ, ನಾನು ನೊಂದುಕೊಳ್ಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾವನಾದರೂ ಬಲವಿಲ್ಲದವನಾದರೆ ನಾನು ಅವನೊಂದಿಗೆ ಬಲವಿಲ್ಲದವನಾಗದೆ ಇರುವೆನೋ? ಯಾವನಾದರೂ ಪಾಪದಲ್ಲಿ ಸಿಕ್ಕಿಕೊಂಡರೆ ನಾನು ತಾಪಪಡುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾವನಾದರೂ ಬಲಹೀನನಾಗಿರುವಾಗ ನಾನೂ ಬಲಹೀನನಾಗಿರುತ್ತೇನೆ. ಯಾವನಾದರೂ ಪಾಪದಲ್ಲಿ ನಡೆಸಲ್ಪಟ್ಟರೆ ನನ್ನೊಳಗೆ ಕೋಪಗೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಬಳನಸ್ತಾನಾ ಅಸಲ್ಲೊ ಭಾವ್ ಕೊನ್ ತೊ ಅನಿ ಮಿಯಾ ತೆಚ್ಯಾ ಸಾಟ್ನಿ ಬಳನಸಲ್ಲೆ ಸರ್ಕೆ ಅನ್ಭೊಗ್ ಕರಿನಸಲ್ಲೊ? ನಾ ಹೊಲ್ಲ್ಯಾರ್ ಎಕ್ಲ್ಯಾಕ್ ವಾಯ್ಟ್ ವಾಟೆಚೆ ಶಿಕಾಪ್ ಗಾವ್ಲೆ ತರ್ ಮರ್ಗು ನಸ್ತಾನಾ ಅಸಲ್ಲೆ ಖೈ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:29
36 ತಿಳಿವುಗಳ ಹೋಲಿಕೆ  

ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು.


ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.


ಮತಿಹೀನ ಮನುಷ್ಯನೇ! ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವಂತವಾಗುವುದಿಲ್ಲ.


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ.


ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು