Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:7 - ಕನ್ನಡ ಸಮಕಾಲಿಕ ಅನುವಾದ

7 ಪ್ರತಿಫಲವನ್ನು ಎದುರುನೋಡದೇ, ದೇವರ ಸುವಾರ್ತೆಯನ್ನು ನೀವು ಉನ್ನತರಾಗಬೇಕೆಂದು, ನನ್ನನ್ನು ನಾನೇ ತಗ್ಗಿಸಿಕೊಂಡು ಉಚಿತವಾಗಿ ಸಾರಿದ್ದು ನನ್ನ ಪಾಪವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಏನು, ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತಾರ್ಥವಾಗಿ ಸಾರಿದ್ದು ಪಾಪಕೃತ್ಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನಿಮಗೆ ದೇವರ ಸುವಾರ್ತೆಯನ್ನು ಉಚಿತವಾಗಿ ಬೋಧಿಸಿದೆನು. ನಿಮ್ಮನ್ನು ಪ್ರಮುಖರನ್ನಾಗಿ ಮಾಡಲು ನನ್ನನ್ನು ತಗ್ಗಿಸಿಕೊಂಡೆನು. ಅದು ತಪ್ಪೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾನ್ ಬರಿ ಖಬರ್ ಫುಕೊಟ್ ತುಮ್ಕಾ ಪರ್‍ಚಾರ್ ಕರುನ್ ತುಮ್ಕಾ ವೈರ್ ಕಾಡುಸಾಟ್ನಿ ಮಿಯಾ ಮಾಕಾಚ್ ಬಾರಿಕ್ ಕರುನ್ ಘೆಟ್ಲೊ. ಹ್ಯಾತುರ್ ಮಿಯಾ ಕಾಯ್ ತರ್ ಪಾಪ್ ಕರ್‍ಲೊ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:7
14 ತಿಳಿವುಗಳ ಹೋಲಿಕೆ  

ನಾನು ನಿಮಗೆ ಎಂದೂ ಭಾರವಾಗಿರಲಿಲ್ಲ ಎಂಬ ಒಂದೇ ವಿಷಯದಲ್ಲಿ ಹೊರತು, ಬೇರೆ ಯಾವ ವಿಷಯದಲ್ಲಿಯೂ ನಿಮ್ಮನ್ನು ಉಳಿದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲ. ಈ ನನ್ನ ತಪ್ಪನ್ನು ಕ್ಷಮಿಸಿರಿ.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ?


ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.


ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.


ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.


ಏಕೆಂದರೆ, ನಿಮ್ಮ ಪ್ರದೇಶಗಳಿಗೆ ಆಚೆ ಇರುವ ಸ್ಥಳಗಳಲ್ಲಿಯೂ ನಾವು ಸುವಾರ್ತೆಯನ್ನು ಸಾರಬೇಕು. ಇತರರು ಮಾಡಿದ ಸೇವಾಕ್ಷೇತ್ರದಲ್ಲಿ ನಾವು ಸೇವೆಮಾಡಿ, ಹೆಚ್ಚಳ ಪಡುವುದಕ್ಕೆ ನಮಗಿಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು