2 ಕೊರಿಂಥದವರಿಗೆ 12:10 - ಕನ್ನಡ ಸಮಕಾಲಿಕ ಅನುವಾದ10 ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತರ್ ಕ್ರಿಸ್ತಾಸಾಟಿ ಮಾಜ್ಯಾ ಪರಿಸ್ಥಿತಿತ್ನಿ ಪರ್ವಾ ಕರಿನಸಲ್ಲ್ಯಾತ್ನಿ, ಕಸ್ಟಾತ್ನಿ, ತರಾಸಾತ್ನಿ ಅನಿ ಸಂಕಟಾತ್ನಿ ಮಿಯಾ ಕುಶ್ ಹೊವ್ನ್ ಹಾಂವ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬಳನಸಲ್ಲ್ಯಾ ಸರ್ಕೊ ರಾತಾನಾ ಖರೆಚ್! ತಾಕ್ತಿನ್ ಭರಲ್ಲೊ. ಅಧ್ಯಾಯವನ್ನು ನೋಡಿ |