Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:12 - ಕನ್ನಡ ಸಮಕಾಲಿಕ ಅನುವಾದ

12 ನಾನು ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ, ಮಹತ್ಕಾರ್ಯಗಳನ್ನೂ ನಡೆಸುವುದರಲ್ಲಿ ಸರ್ವ ಸಹನೆಯಲ್ಲಿಯೂ ಸತ್ಯ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳನ್ನು ನಿಮ್ಮ ನಡುವೆ ತೋರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿಜವಾದ ಪ್ರೇಷಿತನ ಲಕ್ಷಣಗಳಾದ ಕಷ್ಟಸಹಿಷ್ಣುತೆ, ಸೂಚಕಕಾರ್ಯ, ಅದ್ಭುತಕಾರ್ಯ, ಮಹತ್ಕಾರ್ಯ ಇವುಗಳನ್ನೆಲ್ಲಾ ನಿಮ್ಮ ಮುಂದೆ ಪ್ರದರ್ಶಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವದರಲ್ಲಿಯೂ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ತೋರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನಿಮ್ಮೊಂದಿಗಿದ್ದಾಗ ನಾನೂ ಅಪೊಸ್ತಲನೆಂಬುದನ್ನು ನಿರೂಪಿಸುವಂಥ ಸೂಚಕಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಕ್ ಖರೊ ಅಪೊಸ್ತಲ್ ಮನುನ್ ದಾಕ್ವುಕ್ ವಳ್ಕಿಯಾ, ಅಜಾಪಾ ಅನಿ ಮೊಟಿ ಕಾಮಾ ಮಿಯಾ ತುಮ್ಚ್ಯಾ ಮದ್ದಿ ಕರುನ್ ದಾಕ್ವುಲಾ. ಹ್ಯಾತುರ್ ಮಿಯಾ ಸಂಬಾಳುನ್ ಘೆಟಲ್ಲೆ ಕವ್ಡೆ ಮಟ್ಲ್ಯಾರ್ ಎವ್ಡೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:12
9 ತಿಳಿವುಗಳ ಹೋಲಿಕೆ  

ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರಿಗೆ ಕೃತಜ್ಞತೆ ಮಾಡುತ್ತೇನೆ.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು