Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:4 - ಕನ್ನಡ ಸಮಕಾಲಿಕ ಅನುವಾದ

4 ನಾನು ಪರದೈಸಕ್ಕೆ ಒಯ್ಯಲಾದೆನು. ಅಲ್ಲಿ ನಾನು ವಿವರಿಸಲು ಅಸಾಧ್ಯವಾದದ್ದೂ ವರ್ಣಿಸಲು ಅಪ್ಪಣೆಯಿಲ್ಲದ್ದೂ ಆಗಿರುವ ವಿಷಯಗಳನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲಿ ಅವನಿಗೆ ಕೇಳಿಬಂದ ವಿಷಯಗಳು ಮಾನವನ ವರ್ಣನೆಗೆ ಎಟುಕದವು. ಮಾನವನ ನುಡಿಗೆ ನಿಲುಕದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಕಾ ತಿನ್ವ್ಯಾ ಸರ್‍ಗಾರ್ ಪತರ್ ವೊಡುನ್ ಘೆವ್ನ್ ಹೊಲೆ. ಅನಿ ಬೊಲುಕ್ ಹೊಯ್ನಾತ್ ತಸ್ಲಿ ವಿಶಯಾ, ಕೊನ್‍ಬಿ ಮಾನ್ಸಾಕ್ ಬೊಲುಕ್ ಅನುಮತಿ ನಸಲ್ಲ್ಯಾ ಗೊಸ್ಟಿಯಾ ಆಯಿಕ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:4
9 ತಿಳಿವುಗಳ ಹೋಲಿಕೆ  

ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು. ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.


ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.


ಕ್ರಿಸ್ತ ಯೇಸುವಿನಲ್ಲಿ ಒಬ್ಬನನ್ನು ನಾನು ಬಲ್ಲೆನು. ಹದಿನಾಲ್ಕು ವರ್ಷಗಳ ಹಿಂದೆ ನಾನು ಮೂರನೆಯ ಸ್ವರ್ಗಕ್ಕೆ ಒಯ್ಯಲಾದೆನು. ನಾನು ದೇಹ ಸಹಿತವಾಗಿ ಹೋದೆನೋ, ದೇಹ ರಹಿತನಾಗಿ ಹೋದೆನೋ ನನಗೆ ಗೊತ್ತಿಲ್ಲ ದೇವರಿಗೇ ಗೊತ್ತು.


ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.


ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು