Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:6 - ಕನ್ನಡ ಸಮಕಾಲಿಕ ಅನುವಾದ

6 ಒಂದು ವೇಳೆ ಹೊಗಳಿಕೊಳ್ಳಲು ಬಯಸಿದರೂ ನಾನು ಬುದ್ಧಿಹೀನನಾಗುವುದಿಲ್ಲ. ಏಕೆಂದರೆ, ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಆದರೆ ಯಾರೂ ನಾನು ಮಾಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಎಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೊಗಳಿಕೊಳ್ಳುವದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ಬುದ್ಧಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಮಾಜಿ ಬಡಾಯ್ ಸಾಂಗಿಲ್‍ತರ್ ತೆ ಪಿಶೆಪಾನ್ ಹೊಯ್ನಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬೊಲ್ತಾ ತೆ ಖರೆ ಹಾಯ್. ಜಾಲ್ಯಾರ್ಬಿ ಮಾಜ್ಯಾ ಭುತ್ತುರ್ ದಿಸ್ತಾ ಅನಿ ಮಾಜೆಕ್ನಾ ಆಯ್ಕುಕ್ ಗಾವ್ತಾ ತೆಚ್ಯಾನ್ಕಿ ಜಾಸ್ತಿ ಮಾಜ್ಯಾ ವಿಶಯಾತ್ ಮೊಟೆ ಕೊನ್‍ಬಿ ಚಿಂತ್ತಲೆ ನಕ್ಕೊ. ತಸೆ ಮನುನ್ ಮಿಯಾ ಸಾಂಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:6
12 ತಿಳಿವುಗಳ ಹೋಲಿಕೆ  

ನಾನು ಬುದ್ಧಿಹೀನನೆಂದು ಯಾರೂ ನೆನಸಬಾರದೆಂದು ನಾನು ತಿರುಗಿ ಹೇಳುತ್ತೇನೆ. ಒಂದು ವೇಳೆ ಹಾಗೆ ನೆನಸಿದರೆ, ನೀವು ಬುದ್ಧಿಹೀನರನ್ನು ಸ್ವೀಕರಿಸುವಂತೆಯೇ, ನನ್ನನ್ನೂ ಸ್ವೀಕರಿಸಿರಿ. ಆಗ ನನ್ನನ್ನು ನಾನೇ ಪ್ರಶಂಶಿಸಿಕೊಳ್ಳಲು ನನಗೆ ಆಸ್ಪದವಾಗುವುದು.


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.


ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.


ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.


ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.


“ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?”


ನಿಮ್ಮ ವಿಷಯವಾಗಿ ನಾನು ತೀತನ ಮುಂದೆ ಹೊಗಳಿದ್ದಕ್ಕೆ ನಾನು ಬೇಸರಪಡಬೇಕಾಗಿರಲಿಲ್ಲ. ನಾನು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ನಿಮ್ಮ ಬಗ್ಗೆ ನಾವು ತೀತನ ಬಗ್ಗೆ ಹೊಗಳಿದ್ದೆಲ್ಲವೂ ಸತ್ಯವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು