Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:9 - ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತೆನಿ ಮಟ್ಲ್ಯಾನ್, "ಮಾಜಿ ಕುರ್ಪಾ ತುಕಾ ಫಿರೆ, ಕಶ್ಯಾಕ್ ಮಟ್ಲ್ಯಾರ್ ಮಾನ್ಸಾಚ್ಯಾ ಬಳ್‍ನಸಲ್ಲ್ಯಾ ಪರಿಸ್ಥಿತಿತ್ ಮಾಜೊ ಸಗ್ಳೊ ಬಳ್ ದಿಸುನ್ ಯೆತಾ," ತಸೆಮನುನ್ ಕ್ರಿಸ್ತಾಚೊ ಬಳ್ ಮಾಜ್ಯಾ ಭುತ್ತುರ್ ವಸ್ತಿ ಕರುಸಾಟಿ ಮಾಜ್ಯಾ ಬಳನಸಲ್ಲ್ಯಾ ಪರಿಸ್ಥಿತಿಚೆ ಮೊಟೆಪಾನ್ ಮಿಯಾ ಖುಶಿನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:9
38 ತಿಳಿವುಗಳ ಹೋಲಿಕೆ  

ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಈ ಅನುಭವಗಳನ್ನು ಕುರಿತು ನಾನು ಹೆಚ್ಚಳ ಪಡುವೆನು. ಆದರೆ ನನ್ನ ವಿಷಯದಲ್ಲಿ ಅಲ್ಲ; ನನ್ನ ಬಲಹೀನತೆ ವಿಷಯದಲ್ಲಿ ಮಾತ್ರ ನಾನು ಹೊಗಳಿಕೊಳ್ಳುವೆನು.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ನಿಮ್ಮ ನಂಬಿಕೆಯು ಮನುಷ್ಯ ಜ್ಞಾನದ ಮೇಲೆ ಅವಲಂಬಿಸದೆ ದೇವರ ಶಕ್ತಿಯ ಮೇಲೆ ಅವಲಂಬಿಸಬೇಕೆಂದು ನಾನು ಹೀಗೆ ಮಾಡಿದೆನು.


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ನನ್ನನ್ನು ಹೊಗಳಿಕೊಳ್ಳಬೇಕಾಗಿದ್ದರೆ, ನಾನು ನನ್ನ ಬಲಹೀನತೆಯಲ್ಲಿ ಹೊಗಳಿಕೊಳ್ಳುವೆನು.


ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,


ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.


ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು