2 ಕೊರಿಂಥದವರಿಗೆ 13:11 - ಕನ್ನಡ ಸಮಕಾಲಿಕ ಅನುವಾದ11 ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಆಕ್ರಿಕ್ ಮಾಜ್ಯಾ ಭಾವಾನು ಅನಿ ಭೆನಿಯಾನು ಮಿಯಾ ತುಮ್ಕಾ ವಿದಾಯ್ ಮನ್ತಾ, ಸಂಪುರ್ನತಾ ಜೊಡುಕ್ ರಾಬಾ. ಮಾಜ್ಯಾ ಗೊಸ್ಟಿಯಾ ಆಯ್ಕಾ, ಎಕ್ ಮನಾಚೆ ಹೊವಾ, ಸಮಾದಾನ್ ಹುಡ್ಕಾ, ತನ್ನಾ ಪ್ರೆಮಾಚೊ ಅನಿ ಶಾಂತಿಚೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ. ಅಧ್ಯಾಯವನ್ನು ನೋಡಿ |