Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಧನಿಯಾ ಕಡೆ ಪರತಲ್ಲ್ಯಾ ತನ್ನಾ ತೆ ಧಾಪಲ್ಲೆ ಪಡುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:16
13 ತಿಳಿವುಗಳ ಹೋಲಿಕೆ  

ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡುವುದಕ್ಕೆ ಒಳಗೆ ಪ್ರವೇಶಿಸಿ ಹೊರಗೆ ಬರುವವರೆಗೆ ಆ ಮುಸುಕನ್ನು ತೆಗೆದು ಬಿಡುತ್ತಿದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲರಿಗೆ ಹೇಳಿದನು.


ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.


ಸಮಸ್ತ ಜನಾಂಗಗಳನ್ನು ಮುಚ್ಚಿರುವ ಪರದೆಯನ್ನೂ, ಸಕಲ ದೇಶದವರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವರು.


ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ.


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”


ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು.


ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.


ಈ ದಿನದ ತನಕವೂ ಮೋಶೆಯ ಗ್ರಂಥವು ಓದುಗುವಾಗಲೆಲ್ಲಾ, ಅವರ ಹೃದಯಕ್ಕೆ ಮುಸುಕು ಹಾಕಲಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು