Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:17 - ಕನ್ನಡ ಸಮಕಾಲಿಕ ಅನುವಾದ

17 ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪ್ರಭುವು ಪವಿತ್ರಾತ್ಮನೇ. ಎಲ್ಲಿ ಪ್ರಭುವಿನ ಆತ್ಮನು ಇರುತ್ತಾನೋ ಅಲ್ಲಿ ಸ್ವತಂತ್ರವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹಿತ್ತೆ ಧನಿ ಮಟ್ಲ್ಯಾರ್ ಆತ್ಮೊ, ಖೈ ಧನಿಯಾಚೊ ಆತ್ಮೊ ರ್‍ಹಾತಾ, ಥೈ ಸ್ವತಂತ್ರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:17
13 ತಿಳಿವುಗಳ ಹೋಲಿಕೆ  

ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು