Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:2 - ಕನ್ನಡ ಸಮಕಾಲಿಕ ಅನುವಾದ

2 ನೀವೇ ನಮ್ಮ ಹೃದಯದ ಮೇಲೆ ಎಲ್ಲರೂ ಓದಿ ತಿಳಿದುಕೊಳ್ಳಬಹುದಾದ ಪತ್ರವಾಗಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸ್ವತಃ “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀವೇ ನಮ್ಮ ಯೋಗ್ಯತಾಪತ್ರ, ನಮ್ಮ ಹೃದಯ ಪಟಲದ ಮೇಲೆ ಬರೆಯಲಾದ ಪತ್ರ. ಅದನ್ನು ಯಾರು ಬೇಕಾದರೂ ಗುರುತಿಸಬಹುದು. ಓದಿ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವೇ ನಮ್ಮ ಯೋಗ್ಯತಾಪತ್ರ; ಅದು ನಮ್ಮ ಹೃದಯಗಳಲ್ಲೇ ಬರೆದದೆ; ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸ್ವತಃ ನೀವೇ ನಮಗೆ ಯೋಗ್ಯತಾಪತ್ರವಾಗಿದ್ದೀರಿ. ಆ ಪತ್ರಗಳು ನಮ್ಮ ಹೃದಯಗಳಲ್ಲಿ ಬರೆಯಲ್ಪಟ್ಟಿವೆ. ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿಚ್ ಅಮಿ ಯೊಗ್ಯ್ ಮನುನ್ ದಾಕ್ವುತಲ್ಯಾ ಚಿಟಿಯಾ. ತೆ ಅಮ್ಚ್ಯಾ ಮನಾತ್ನಿ ಲಿವಲ್ಲೆ ಹಾಯ್. ಸಗ್ಳ್ಯಾ ಲೊಕಾಕ್ನಿ ತೆ ತಪಾಸುನ್ ಬಗುಕ್ ಅನಿ ವಾಚ್ವುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:2
9 ತಿಳಿವುಗಳ ಹೋಲಿಕೆ  

ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ಏಕೆ? ನಾನು ನಿಮ್ಮನ್ನು ಪ್ರೀತಿ ಇಲ್ಲದ್ದರಿಂದಲೋ? ನಾನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತುಂಟು!


ನಿಮ್ಮ ಮೇಲೆ ತಪ್ಪು ಹೊರಿಸುವುದಕ್ಕಾಗಿ ನಾನು ಇದನ್ನು ನಿಮಗೆ ಹೇಳುತ್ತಿಲ್ಲ. ನಾವು ನಿಮ್ಮೊಂದಿಗೆ ಜೀವಿಸಿ, ಸಾಯುವಷ್ಟರ ಮಟ್ಟಿಗೆ ನಾವು ನಮ್ಮ ಹೃದಯದಾಳದಿಂದ ನಿಮ್ಮನ್ನು ಪ್ರೀತಿಸುತ್ತಿದ್ದೇವೆ ಎಂದು ನಾನು ಹಿಂದೆ ಹೇಳಲಿಲ್ಲವೇ?


ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.


ನಮ್ಮನ್ನು ನಾವೇ ತಿರುಗಿ ಶಿಫಾರಸ್ಸು ಮಾಡಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಬೇರೆಯವರಂತೆ ನಿಮಗೆ ತೋರಿಸುವುದಕ್ಕೆ ಯೋಗ್ಯತಾಪತ್ರವು ಬೇಕೋ ಅಥವಾ ನಿಮ್ಮಿಂದ ನಮಗೆ ಯೋಗ್ಯತಾಪತ್ರವು ಬೇಕಾಗಿದೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು