Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:6 - ಕನ್ನಡ ಸಮಕಾಲಿಕ ಅನುವಾದ

6 ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಅಮ್ಕಾ ನವ್ಯಾ ಕರಾರಾಚಿ ಕರುನ್ ಯೊಗ್ಯ್ ಕರ್‍ತಾ, ತೆ ಲಿವಲ್ಲೊ ಖಾಯ್ದೊ ನ್ಹಯ್, ಅತ್ಮ್ಯಾಚ್ಯಾ ವೈನಾ ದಾಕ್ವುನ್ ದಿತಾ, ಲಿವಲ್ಲೊ ಖಾಯ್ದೊ ಮರಾನ್ ಹಾನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:6
45 ತಿಳಿವುಗಳ ಹೋಲಿಕೆ  

ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.


ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.


ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.


“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.


ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.


ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.


ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.


ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ.


ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.


ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ.


ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.


ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.


ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.


ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ.


ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು