Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:7 - ಕನ್ನಡ ಸಮಕಾಲಿಕ ಅನುವಾದ

7 ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮರಣವಿಧಿಸುವ ನಿಯಮದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿ ಆಧಾರಗೊಂಡಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು. ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿಹೋಗುವಂಥದಾಗಿದ್ದರೂ ಅದರ ನಿವಿುತ್ತ ಇಸ್ರಾಯೇಲ್ಯರು ಅವನ ಮುಖವನ್ನು ನೋಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮರಾನ್ ಹಾನ್ತಲೊ ಖಾಯ್ದೊ ಗುಂಡ್ಯಾಂಚ್ಯಾ ಫಳಿ ವೈನಿ ಲಿವ್ನ್ ಹೊಲಾ, ಅನಿ ತೆ ದಿಲ್ಲ್ಯಾ ತನ್ನಾ ದೆವಾಚಿ ಮಹಿಮಾ ದಿಸ್ಲಿ, ಮೊಯ್ಜೆಚ್ಯಾ ತೊಂಡಾ ವೈಲೊ ಉಜ್ವೊಡ್ ಸೈತ್ ತರಾಸಾಚೊ ಹೊತ್ತೊ. ತೊ ಉಜ್ವೊಡ್ ಲೈ ಮೊಟೊ ಹೊತ್ತೊ. ತಸೆ ಮನುನ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಅಪ್ನಾಚ್ಯಾ ಡೊಳಾನಿ ತೆಕಾ ಬಗುಕ್ ಹೊವುಕ್ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:7
38 ತಿಳಿವುಗಳ ಹೋಲಿಕೆ  

ಆದರೆ ಸಂಪೂರ್ಣವಾದದ್ದು ಬಂದಾಗ, ಭಾಗವಾದದ್ದು ಅಳಿದುಹೋಗುವುದು.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.


ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


ಜೀವವನ್ನು ತರಲಿಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣವನ್ನು ಉಂಟುಮಾಡುವುದಾಯಿತು ಎಂದು ಕಂಡುಕೊಂಡೆನು.


ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.


ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ, ನಿಮ್ಮ ನಿಯಮವೇ ನನಗೆ ಆನಂದವಾಗಿದೆ.


ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು. ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು. ಒಡಂಬಡಿಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.


ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.


ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.


ಯೆಹೋವ ದೇವರು ಮೋಶೆಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.


ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.


ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದರು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


“ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.


ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?


ಈ ಮಾತುಗಳನ್ನು ಯೆಹೋವ ದೇವರು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯದೊಳಗಿಂದ, ನಿಮ್ಮ ಸಭೆಗೆಲ್ಲಾ ಕೇಳಿಸುವಂತೆ ಮಹಾ ಸ್ವರದಿಂದ ನುಡಿದರು. ಅವರು ಹೆಚ್ಚೇನೂ ಕೂಡಿಸಲಿಲ್ಲ. ದೇವರು ಈ ಮಾತುಗಳನ್ನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ಆದರೆ ಪವಿತ್ರಾತ್ಮ ದೇವರಿಂದ ಜೀವವನ್ನು ಉಂಟುಮಾಡುವ ಸೇವೆಯು ಎಷ್ಟೋ ಹೆಚ್ಚಾಗಿ ಮಹಿಮೆಯುಳ್ಳದ್ದಾಗಿರಬೇಕು?


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.


ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ, ಮೋಶೆಗಿಂತ ಯೇಸು ಹೆಚ್ಚಾದ ಮಹಿಮೆಗೆ ಯೋಗ್ಯರೆಂದು ಎಣಿಸಿಕೊಂಡಿದ್ದಾರೆ.


ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು