Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:1 - ಕನ್ನಡ ಸಮಕಾಲಿಕ ಅನುವಾದ

1 ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಕಾಮ್ ದೆವಾನ್ ಅಪ್ನಾಚ್ಯಾ ದಯೆನ್ ಅಮ್ಚ್ಯಾ ತಾಬೆತ್ ದಿಲ್ಯಾನಾಯ್. ತಸೆಮನುನ್ ಅಮಿ ಅಮ್ಚೊ ಧೈರೊ ಸೊಡಿನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:1
19 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.


ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.


ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.


ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ:


ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.


ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.


ಯೌವನಸ್ಥರೋ ದಣಿದು ಬಳಲುವರು ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.


ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು