Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:11 - ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸುವಿನ ಜೀವವು ನಮ್ಮ ಮರ್ತ್ಯಶರೀರದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿವಿುತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುಚೊ ಜಿವ್ ಅಮ್ಚ್ಯಾ ನಾಸ್ ಹೊತಲ್ಯಾ ಆಂಗಾತ್ ದಿಸುನ್ ಯೆವ್‍ಸಾಟ್ನಿ ಅಮ್ಚ್ಯಾ ಜಿವನಾಚ್ಯಾ ಹರ್ ಎಕ್ ದಿಸಿ ಜೆಜುಸಾಟ್ನಿ ಮರ್ನಾಚ್ಯಾ ಪರಿಸ್ತಿತಿತ್ ಅಮ್ಕಾಚ್ ಅಮಿ ಸೊಡುನ್ ಸೊಡ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:11
11 ತಿಳಿವುಗಳ ಹೋಲಿಕೆ  

ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.


ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”


ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.


ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.


ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.”


ಯೇಸುವಿನ ಜೀವವು ನಮ್ಮ ಶರೀರದಲ್ಲಿ ಪ್ರಕಟವಾಗುವಂತೆ, ನಾವು ಯಾವಾಗಲೂ ನಮ್ಮ ಶರೀರದಲ್ಲಿ ಯೇಸುವಿನ ಮರಣವನ್ನು ಧರಿಸುವವರಾಗಿರುತ್ತೇವೆ.


ಹೀಗಿರುವುದರಿಂದ, ನಮ್ಮೊಳಗೆ ಮರಣವು ಕಾರ್ಯ ಮಾಡುತ್ತದೆ, ಆದರೆ ನಿಮ್ಮೊಳಗೆ ಜೀವವು ಕಾರ್ಯ ಮಾಡುತ್ತದೆ.


ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು