2 ಕೊರಿಂಥದವರಿಗೆ 4:15 - ಕನ್ನಡ ಸಮಕಾಲಿಕ ಅನುವಾದ15 ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಬಗಾ ಹೆ ಸಗ್ಳೆ ತುಮ್ಚ್ಯಾ ಬರೆಪಾನಾ ಸಾಟ್ನಿ ಮನುನ್ ತಯಾರ್ ಕರಲ್ಲೆ ಹಾಯ್. ಅಶೆ ದೆವಾಚ್ಯಾ ಕುರ್ಪೆಚೊ ಪಾವ್ಸ್ ಲೈ ಅನಿ ಲೈ ಮಾನ್ಸಾಚ್ಯಾ ವರ್‍ತಿ ಉತರ್ತಾನಾ, ದೆವಾಚ್ಯಾ ಮಹಿಮೆಕ್ ಧನ್ಯವಾದ್ ಸುತ್ತಿಬಿ ಜಾಸ್ತಿ ಚಡುನ್ಗೆತ್ ಜಾತಾ. ಅಧ್ಯಾಯವನ್ನು ನೋಡಿ |