2 ಕೊರಿಂಥದವರಿಗೆ 4:2 - ಕನ್ನಡ ಸಮಕಾಲಿಕ ಅನುವಾದ2 ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಲಜ್ಜಾ ಕರುನ್ ಧಾಪುನ್ ನ್ಹೆತಲ್ಯಾ ತ್ಯಾ ಚಾಲಿಯಾ ಅಮಿ ಸೊಡ್ತಾಂವ್; ಅಮಿ ಕಪಟ್ ಚಾಲಿನ್ ಚಲಿನಾವ್ ಅನಿ ದೆವಾಚಿ ಗೊಸ್ಟ್ ಕನ್ನಾಚ್ ಝುಟಿ ಕರಿನಾವ್, ಸಾಂಗುಚೆ ಜಾಲ್ಯಾರ್, ಖರೆ ಅಸಲ್ಲೆ ಪರ್ಗಟ್ ಕರ್ತಾಂವ್. ದೆವಾಚ್ಯಾ ಇದ್ರಾಕ್ ಅಮಿ ಹರ್ ಎಕ್ ಮಾನ್ಸಾಚ್ಯಾ ಭುತ್ತುರ್‍ಲ್ಯಾ ಮನಾಕ್ನಿ ಬರೆ ದಿಸಿ ಸಾರ್ಕೆ ಚಲ್ತಾಂವ್. ಅಧ್ಯಾಯವನ್ನು ನೋಡಿ |