Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:3 - ಕನ್ನಡ ಸಮಕಾಲಿಕ ಅನುವಾದ

3 ನಾವು ಪ್ರಚಾರ ಮಾಡುವ ಸುವಾರ್ತೆಯು ಮುಸುಕು ಹಾಕಿರುವುದಾದರೆ, ಅದು ನಾಶದ ಮಾರ್ಗದಲ್ಲಿರುವವರಿಗೆ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾವು ಪ್ರಚಾರಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವದಾದರೆ ನಾಶನಮಾರ್ಗದಲ್ಲಿರುವವರಿಗೇ ಮರೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ಬೋಧಿಸುವ ಸುವಾರ್ತೆಯು ಮರೆಯಾಗಿರಬಹುದು. ಆದರೆ ನಾಶನದ ಮಾರ್ಗದಲ್ಲಿರುವವರಿಗೆ ಮಾತ್ರ ಅದು ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ಪರ್ಗಟ್ ಕರ್ತಾಂವ್ ತಿ ಬರಿ ಖಬರ್ ಉಲ್ಲ್ಯಾ ಲೊಕಾಕ್ನಿ ತಿ ಧಾಪುನ್ ಥವಲ್ಲಿ ಹಾಯ್, ಜಾಲ್ಯಾರ್ಬಿ ನಾಸಾಚ್ಯಾ ವಾಟೆನ್ ಜಾತಲ್ಯಾಕ್ನಿ ಎವ್ಡಿಚ್ ತಿ ಧಾಪಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:3
11 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.


ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.


ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು