Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಅಶೆ, ಸಾಂಗುಕ್ ಹೊಯ್ನಾ ತಸ್ಲಿ ಪದ್ವಿ ಅಮ್ಚ್ಯಾತ್ನಾ ನ್ಹಯ್, ದೆವಾಕ್ನಾ ಯೆತಾ ಮನುನ್ ದಾಕ್ವುನ್ ದಿವ್‍ಸಾಟಿ ಹೆ ಬದಿಕ್ ಅಮಿ ಮಾಟಿಚ್ಯಾ ಆಯ್ದಾನಾತ್ನಿ ವಾವುನ್ ಘೆವ್ನ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:7
31 ತಿಳಿವುಗಳ ಹೋಲಿಕೆ  

ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.


ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.


ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!


ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.


“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.


ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.


ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.


ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.


ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು.


ದುಃಖ ಪಡುವವರಾಗಿದ್ದರೂ ಹರ್ಷಿಸುತ್ತಿದ್ದೆವು, ಬಡವರಾಗಿದ್ದಾಗಲೂ ಅನೇಕರನ್ನು ಐಶ್ವರ್ಯವಂತರನ್ನಾಗಿ ಮಾಡಿದೆವು, ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಾಗಿದ್ದೇವೆ.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?


ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು