Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:15 - ಕನ್ನಡ ಸಮಕಾಲಿಕ ಅನುವಾದ

15 ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜಿವನ್ ಕರ್ತಲ್ಯಾನಿ ಹೆಚ್ಯಾ ಫಿಡೆ ಅಪ್ನಾಚ್ಯಾಸಾಟ್ನಿ ಜಿವನ್ ಕರುಚೆ ನ್ಹಯ್, ಖರೆ ಅಪ್ನಾಸಾಟ್ನಿ ಜೊ ಕೊನ್ ಮರ್ಲೊ ಅನಿ ಮಾನಾ ಝಿತ್ತೊ ಹೊಲೊ ತೆಚೆಸಾಟ್ನಿ ಜಿವನ್ ಕರುಕ್ ಪಾಜೆ ಮನುನ್ ತೊ ಸಗ್ಳ್ಯಾಂಚ್ಯಾಸಾಟ್ನಿ ಮರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:15
41 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.


ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.


ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.


ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.


ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ.


ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.


ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.


ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”


ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?


ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’ ”


“ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.


ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು.


ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು