Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:16 - ಕನ್ನಡ ಸಮಕಾಲಿಕ ಅನುವಾದ

16 ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆಮನುನ್ ಹೆಚ್ಯಾನ್ ಫಿಡೆ ಹ್ಯಾ ಜಗಾಚ್ಯಾ ಸ್ಥಿತಿಗತಿ ಸಾರ್ಕೆ ಅಮಿ ಕೊನಾಕ್‍ಬಿ ಕಿಮ್ಮತ್ ಭಾಂದಿನಾವ್, ಎಕ್ ಕಾಲಾತ್ ಅಮಿ ಕ್ರಿಸ್ತಾಕುಚ್ ಹ್ಯಾ ದಿಸ್ಟಿನ್ ಕಿಮ್ಮತ್ ಭಾಂದಲ್ಲಿ ಹಾಯ್, ಜಾಲ್ಯಾರ್‍ಬಿ ಅಮಿ ಅತ್ತಾ ತಶೆ ಕರಿನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:16
19 ತಿಳಿವುಗಳ ಹೋಲಿಕೆ  

ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಅನೇಕರು ಪ್ರಾಪಂಚಿಕ ವಿಷಯಗಳಲ್ಲಿ ತಮ್ಮನ್ನು ಹೊಗಳಿಕೊಳ್ಳುವಂತೆ ನಾನೂ ಹೊಗಳಿಕೊಳ್ಳುವೆನು.


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ.


ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.


ಮಾಂಸದಲ್ಲಿ ಭರವಸೆ ಇಡಲು ನನಗೆ ಸಾಕಷ್ಟು ಕಾರಣಗಳಿವೆ. ಬೇರೆ ಯಾವನಾದರೂ ಮಾನವೀಯ ಪ್ರಯತ್ನಗಳಲ್ಲಿ ಭರವಸೆ ಇಡಬಹುದೆಂದು ಭಾವಿಸುವುದಾದರೆ, ನಾನು ಅದಕ್ಕಿಂತಲೂ ಹೆಚ್ಚಾಗಿ ಹೇಳಬಹುದು:


ಆಗ ಅವನು ಅವನಿಗೆ, “ನಾನು ಬರುವುದಿಲ್ಲ. ನನ್ನ ದೇಶಕ್ಕೂ ನನ್ನ ಬಂಧುಗಳ ಬಳಿಗೂ ನಾನು ಹೋಗುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು