2 ಕೊರಿಂಥದವರಿಗೆ 5:20 - ಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತಶೆ ಹೊಲ್ಯಾರ್ ಅಮಿ ಕ್ರಿಸ್ತಾಚೆ ಪ್ರತಿನಿದಿ ; ಅಮ್ಚ್ಯಾ ವೈನಾ ದೆವ್ ತುಮ್ಕಾ ಬಲ್ವುತಾ. ತಶೆ ಮನುನ್ ಕ್ರಿಸ್ತಾಚ್ಯಾ ನಾವಾನ್ ಅಮಿ ತುಮ್ಚ್ಯಾಕ್ಡೆ ಮಾಗ್ತಾವ್, ದೆವಾಕ್ಡೆ ರಾಜಿ ಹೊವಾ! ಅಧ್ಯಾಯವನ್ನು ನೋಡಿ |
“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.