Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಮಕ್ಕಳಿಗೆ ಹೇಳುವ ರೀತಿಯಲ್ಲಿ ನಿಮಗೆ ಹೇಳುತ್ತಿದ್ದೇವೆ. ನಾವು ನಿಮ್ಮನ್ನು ಪೂರ್ಣಹೃದಯದಿಂದ ಪ್ರೀತಿಸಿದಂತೆ ನೀವೂ ಪೂರ್ಣಹೃದಯದಿಂದ ನಮ್ಮನ್ನು ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ: ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವೂ ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ವಿಷಯದಲ್ಲಿ ನಮ್ಮ ಹೃದಯವು ವಿಶಾಲವಾಗಿರುವದರಿಂದ ನಮ್ಮ ವಿಷಯದಲ್ಲಿ ನಿಮ್ಮ ಹೃದಯವನ್ನೂ ವಿಶಾಲಮಾಡಿಕೊಳ್ಳಿರಿ. ನೀವು ನನ್ನ ಮಕ್ಕಳೆಂದು ಭಾವಿಸಿ ಹೀಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನನ್ನ ಮಕ್ಕಳೆಂಬಂತೆ ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾವು ತೆರೆದಂತೆ ನೀವು ಸಹ ನಿಮ್ಮ ಹೃದಯಗಳನ್ನು ತೆರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಪ್ನಾಚ್ಯಾ ಪೊರಾಂಚ್ಯಾಕ್ಡೆ ಬೊಲ್ತಾ ತಶೆ ಮಿಯಾ ಬೊಲ್ತಾ. ಮಿಯಾ ಕರಲ್ಲ್ಯಾ ಸರ್ಕೆ ತುಮ್ಚಿಬಿ ಮನಾ ಉಗ್ಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:13
19 ತಿಳಿವುಗಳ ಹೋಲಿಕೆ  

ನನ್ನ ಮಕ್ಕಳು ಸತ್ಯವನ್ನು ಅನುಸರಿಸಿ ಬಾಳುತ್ತಿದ್ದಾರೆಂದು ಕೇಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.


ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ಪ್ರಿಯರೇ, ನಾನು ನಿಮ್ಮ ಹಾಗೆ ಆದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೆ ಯಾವ ಕೇಡನ್ನೂ ಮಾಡಲಿಲ್ಲ.


ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.


ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ; ನಿಮ್ಮ ಬಾಯಿಯನ್ನು ಅಗಲವಾಗಿ ತೆರೆ, ಆಗ ಅದನ್ನು ತುಂಬಿಸುವೆನು.


ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.


ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು