Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:5 - ಕನ್ನಡ ಸಮಕಾಲಿಕ ಅನುವಾದ

5 ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಮಾರ್ ಖಾತಾನಾ, ಬಂದಿಖಾನ್ಯಾತ್ ಪಡಲ್ಲ್ಯಾ ತನ್ನಾ, ಡಂಗೊ ಉಟಲ್ಲ್ಯಾ ತನ್ನಾ, ಅಮಿ ನಿಜ್ ಅನಿ ಜೆವಾನ್ ನಸ್ತಾನಾ ಘಟ್ ಕಾಮ್ ಕರ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:5
48 ತಿಳಿವುಗಳ ಹೋಲಿಕೆ  

ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,


ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.


ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.


ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.


ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


“ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.


ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.


ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.


ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು.


ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.


ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.


ಪೆಟ್ಟಿನ ಶಿಕ್ಷೆ ನಲವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚುಪೆಟ್ಟುಗಳನ್ನು ಹೊಡಿಸಿದರೆ, ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು