2 ಕೊರಿಂಥದವರಿಗೆ 7:13 - ಕನ್ನಡ ಸಮಕಾಲಿಕ ಅನುವಾದ13 ಆದಕಾರಣ ಇವೆಲ್ಲವುಗಳಿಂದ ನಮಗೆ ಉತ್ತೇಜನವಾಯಿತು. ನಮಗೆ ಉತ್ತೇಜನವಾಗಿದ್ದು ಅಲ್ಲದೆ, ನಿಮ್ಮೆಲ್ಲರಿಂದ ತೀತನ ಆತ್ಮಕ್ಕೆ ಉಪಶಮನವಾದ ಕಾರಣ, ನಾವು ಅವನ ಸಂತೋಷಕ್ಕಾಗಿ ಇನ್ನಷ್ಟು ಆನಂದಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದಕಾರಣ ನಮ್ಮ ಮನಸ್ಸಿಗೆ ಆದರಣೆ ಉಂಟಾಯಿತು. ಅಷ್ಟು ಮಾತ್ರವೇ ಅಲ್ಲ, ತೀತನ ಮನಸ್ಸಿಗೆ ನಿಮ್ಮೆಲ್ಲರಿಂದ ಉಪಶಮನವಾದ ಕಾರಣ ನಾವು ಅವನ ಸಂತೋಷವನ್ನು ನೋಡಿ ಮತ್ತೂ ಹೆಚ್ಚಾಗಿ ಸಂತೋಷಪಟ್ಟೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಸಮಾದಾನ್ ಸಾಂಗ್ತಲ್ಯಾಚ್ಯಾ ಭಾಯ್ರ್, ತಿತಾಚಿ ಕುಶಿ ಬಗುನ್ ಅಮ್ಚಿ ಕುಶಿ ದೊನ್‍ಪಟ್ ಹೊಲಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಸಗ್ಳ್ಯಾನಿಬಿ ತಿತಾಚ್ಯಾ ಮನಾಕ್ ಸಮಾದಾನ್ ದಿಲ್ಯಾಶಿ. ಅಧ್ಯಾಯವನ್ನು ನೋಡಿ |