Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:3 - ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಮೇಲೆ ತಪ್ಪು ಹೊರಿಸುವುದಕ್ಕಾಗಿ ನಾನು ಇದನ್ನು ನಿಮಗೆ ಹೇಳುತ್ತಿಲ್ಲ. ನಾವು ನಿಮ್ಮೊಂದಿಗೆ ಜೀವಿಸಿ, ಸಾಯುವಷ್ಟರ ಮಟ್ಟಿಗೆ ನಾವು ನಮ್ಮ ಹೃದಯದಾಳದಿಂದ ನಿಮ್ಮನ್ನು ಪ್ರೀತಿಸುತ್ತಿದ್ದೇವೆ ಎಂದು ನಾನು ಹಿಂದೆ ಹೇಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮನ್ನು ನಿಂದಿಸುವುದಕ್ಕಾಗಿ ಇದನ್ನು ನಾನು ಹೇಳುತ್ತಿಲ್ಲ; ಈ ಮೊದಲೇ ನಿಮಗೆ ತಿಳಿಸಿರುವಂತೆ, ‘ಸತ್ತರೂ ಒಂದಾಗಿ ಸಾಯುತ್ತೇವೆ, ಬದುಕಿದರೂ ಒಂದಾಗಿ ಬದುಕುತ್ತೇವೆ,” ಎನ್ನುವಷ್ಟರ ಮಟ್ಟಿಗೆ ನೀವು ನನ್ನ ಹೃದಯದಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ. ಕೂಡಾ ಸಾಯುವದಕ್ಕೂ ಕೂಡಾ ಬದುಕುವದಕ್ಕೂ ನೀವು ನಮ್ಮ ಹೃದಯದಲ್ಲಿದ್ದೀರೆಂದು ಮೊದಲೇ ಹೇಳಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಇದನ್ನು ಹೇಳುತ್ತಿರುವುದು ನಿಮ್ಮನ್ನು ನಿಂದಿಸುವುದಕ್ಕಾಗಿಯಲ್ಲ. ನಿಮ್ಮೊಂದಿಗೆ ಬದುಕುವಷ್ಟರಮಟ್ಟಿಗೆ ಮತ್ತು ಸಾಯುವಷ್ಟರಮಟ್ಟಿಗೆ ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತೇವೆಂದು ನಾನು ಮೊದಲೇ ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮ್ಚ್ಯಾ ವರ್‍ತಿ ಅಪ್ವಾದ್ ಘಾಲುಚೆ ಮನುನ್ ಮಿಯಾ ಹೆ ಸಾಂಗಿನಾ ಹೊಲಾ. ತುಮಿ ಮಾಜ್ಯಾ ಮನಾತ್ ಕವ್ಡೆ ಬಸಲ್ಲೆ ಹಾಸಿ ಕಾಯ್ ಮಟ್ಲ್ಯಾರ್ ಝಿತ್ತೊ ರ್‍ಹಾಲ್ಯಾರ್‍ಬಿ ಮರ್‍ಲ್ಯಾರ್ಬಿ, ಮಿಯಾ ತುಮ್ಚೊ ವಾಂಗ್ಡಿ ಮನುನ್ ಮಿಯಾ ಹೆಚ್ಯಾ ಅದ್ದಿಚ್ ಸಾಂಗಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:3
12 ತಿಳಿವುಗಳ ಹೋಲಿಕೆ  

ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ಏಕೆ? ನಾನು ನಿಮ್ಮನ್ನು ಪ್ರೀತಿ ಇಲ್ಲದ್ದರಿಂದಲೋ? ನಾನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತುಂಟು!


ನಾನು ಆ ಪತ್ರ ನಿಮಗೆ ಬರೆದದ್ದು, ತಪ್ಪು ಮಾಡಿದವನಿಗೋಸ್ಕರವಾಗಿ ಅಲ್ಲ ಮತ್ತು ಆ ತಪ್ಪಿನಿಂದ ಹಾನಿಯಾದವರಿಗೋಸ್ಕರವಾಗಿಯೂ ಅಲ್ಲ, ನೀವು ನಮಗೆ ಎಷ್ಟು ನಿಷ್ಠೆಯುಳ್ಳವರು ಎಂದು ದೇವರ ಸನ್ನಿಧಿಯಲ್ಲಿ ನಿಮಗೆ ನೀವೇ ನೋಡುವಂತೆ ಬರೆದೆನು.


ನೀವೇ ನಮ್ಮ ಹೃದಯದ ಮೇಲೆ ಎಲ್ಲರೂ ಓದಿ ತಿಳಿದುಕೊಳ್ಳಬಹುದಾದ ಪತ್ರವಾಗಿರುತ್ತೀರಿ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು