Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:18 - ಕನ್ನಡ ಸಮಕಾಲಿಕ ಅನುವಾದ

18 ಅವನೊಂದಿಗೆ ಇನ್ನೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇನೆ. ಆ ಸಹೋದರನು ಮಾಡಿದ ಸುವಾರ್ತೆ ಸೇವೆಯನ್ನು ಎಲ್ಲಾ ಸಭೆಗಳವರು ಪ್ರಶಂಶಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆತನ ಸಂಗಡ ಇನ್ನೊಬ್ಬ ಸಹೋದರನನ್ನು ಕಳುಹಿಸುತ್ತಿದ್ದೇವೆ. ಈತನು ಶುಭಸಂದೇಶವನ್ನು ಸಾರುವುದರಲ್ಲಿ ಎಲ್ಲ ಸಭೆಗಳಿಂದ ಪ್ರಶಂಸೆ ಪಡೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ; ಈ ಸಹೋದರನು ಸುವಾರ್ತಾಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿಪಡಕೊಂಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಚ್ಯಾ ವಾಂಗ್ಡಾ ಅಮಿ ಎಕ್ಲ್ಯಾ ಭಾವಾಕ್ ಧಾಡ್ತಾವ್ ಬರಿ ಖಬರ್ ಪ್ರಚಾರ್ ಕರ್‍ತಲ್ಯಾ ಕಾಮಾಕ್ ತೊ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಗೊತ್ತ್ ಹೊತ್ತೊ ಮಾನುಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:18
8 ತಿಳಿವುಗಳ ಹೋಲಿಕೆ  

ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಒತ್ತಾಯಪಡಿಸಿ, ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನು. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಆತ್ಮದಲ್ಲಿ ನಡೆದು ಒಂದೇ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?


ಅಲ್ಲದೆ, ಕರ್ತ ಯೇಸುವಿನ ಮಹಿಮೆಗಾಗಿಯೂ ಸಹಾಯಮಾಡಬೇಕೆಂಬ ಸದುದ್ದೇಶ ತೋರಿಸುವುದಕ್ಕಾಗಿಯೂ ನಾವು ಸೇವೆಯನ್ನು ನಿರ್ವಹಿಸುತ್ತೇವೆ. ಇದಕ್ಕಾಗಿಯೇ, ನಮ್ಮ ಜೊತೆ ಬಂದು ಸಹಾಯಮಾಡಲು ಸಭೆಗಳಿಂದ ಆಯ್ಕೆಯಾದವನು ಆ ಸಹೋದರನು.


ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.


ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.


ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ.


ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.


ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು