Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:6 - ಕನ್ನಡ ಸಮಕಾಲಿಕ ಅನುವಾದ

6 ಹೀಗಿರಲಾಗಿ, ತೀತನು ಪ್ರಾರಂಭಿಸಿದ ಈ ದಾನ ಕಾರ್ಯವನ್ನು ನಿಮ್ಮಲ್ಲಿ ಸಹ ಪೂರ್ಣಗೊಳಿಸಬೇಕೆಂದು ನಾವು ಅವನನ್ನು ಬಹಳವಾಗಿ ಕೇಳಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲಾಗಿ ಈ ಧರ್ಮಕಾರ್ಯವನ್ನು ಮಾಡುವದಕ್ಕೆ ಮೊದಲು ನಿಮ್ಮನ್ನು ಪ್ರೇರೇಪಿಸಿದ ತೀತನು ತಿರಿಗಿ ನಿಮ್ಮ ಬಳಿಗೆ ಬಂದು ಅದನ್ನು ತೀರಿಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚೆಸಾಟ್ನಿ ತಿತಾನ್ ಪಯ್ಲೆಚ್ ತುಮ್ಚ್ಯಾ ಮದ್ದಿ ಸುರು ಕರಲ್ಲೆ ತೆ ದಾನ್ ಗೊಳಾ ಕರ್‍ತಲೆ ಕಾಮ್ ತೆನಿಚ್ ಜಾವ್ನ್ ಪುರಾ ಕರುಚೆ ಮನುನ್ ತೆಕಾ ಜಬರ್ದಸ್ತಿ ಕರ್‍ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:6
12 ತಿಳಿವುಗಳ ಹೋಲಿಕೆ  

ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಒತ್ತಾಯಪಡಿಸಿ, ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನು. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಆತ್ಮದಲ್ಲಿ ನಡೆದು ಒಂದೇ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?


ಅಲ್ಲದೆ, ಕರ್ತ ಯೇಸುವಿನ ಮಹಿಮೆಗಾಗಿಯೂ ಸಹಾಯಮಾಡಬೇಕೆಂಬ ಸದುದ್ದೇಶ ತೋರಿಸುವುದಕ್ಕಾಗಿಯೂ ನಾವು ಸೇವೆಯನ್ನು ನಿರ್ವಹಿಸುತ್ತೇವೆ. ಇದಕ್ಕಾಗಿಯೇ, ನಮ್ಮ ಜೊತೆ ಬಂದು ಸಹಾಯಮಾಡಲು ಸಭೆಗಳಿಂದ ಆಯ್ಕೆಯಾದವನು ಆ ಸಹೋದರನು.


ದೇವಜನರಿಗೆ ಸಹಾಯಮಾಡಲು ಭಾಗಿಗಳಾಗುವ ಅವಕಾಶವನ್ನು ತಮಗೆ ಕೊಡಬೇಕೆಂದು ಅವರು ತಾವಾಗಿಯೇ ನಮ್ಮನ್ನು ಬಹಳವಾಗಿ ಕೇಳಿಕೊಂಡರು.


ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಆದ್ದರಿಂದ ಸಹೋದರರನ್ನು ಮುಂಚಿತವಾಗಿ ಹೋಗುವುದಕ್ಕೆ ನಾನು ಏರ್ಪಾಡು ಮಾಡಬೇಕಾಯಿತು. ಅವರು ಬಂದು ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಕಾರ್ಯವನ್ನು ಮುಗಿಸುವರು. ಹೀಗೆ ಈ ಉದಾರವಾಗಿರುವ ದಾನವು ಬಲಾತ್ಕಾರದ ವಸೂಲಿಯಾಗಿರದೆ ಮನಃಪೂರ್ವಕವಾಗಿ ಕೊಟ್ಟಿರುವ ಸಹಾಯ ಧನವಾಗಿರುವುದು.


“ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.


ಈಗಲಾದರೋ ನಾನು ದೇವಜನರ ಸೇವೆಗಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.


ನನ್ನ ಸಹೋದರನಾದ ತೀತನು ನನಗೆ ಅಲ್ಲಿ ಸಿಗದಿದ್ದ ಕಾರಣ, ನನ್ನ ಆತ್ಮಕ್ಕೆ ಇನ್ನೂ ವಿಶ್ರಾಂತಿಯಿರಲಿಲ್ಲ. ಆದ್ದರಿಂದ ತ್ರೋವದವರಿಗೆ ನಾನು ನನ್ನ ವಂದನೆಗಳನ್ನರ್ಪಿಸಿ ಮಕೆದೋನ್ಯ ಪ್ರಾಂತಕ್ಕೆ ಹೋದೆನು.


ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ, ಕಳೆದ ವರ್ಷದಲ್ಲಿ ಮೊದಲು ನೀವೇ ಈ ಕಾರ್ಯವನ್ನು ಪ್ರಾರಂಭಿಸಿದ್ದಲ್ಲದೇ ಇದನ್ನು ಮಾಡಬೇಕೆಂದು ಬಯಸಿದ್ದೀರಿ.


ತೀತನು ನನ್ನ ಸಹೋದ್ಯೋಗಿ ಮತ್ತು ನಿಮ್ಮ ನಡುವೆಯಿರುವ ನನ್ನ ಸಹಕಾರಿಯಾಗಿರುತ್ತಾನೆ. ಇವನ ಸಂಗಡ ಬರುತ್ತಿರುವ ನಮ್ಮ ಸಹೋದರರು ಸಭೆಗಳ ಪ್ರತಿನಿಧಿಗಳಾಗಿದ್ದಾರೆ ಮತ್ತು ಕ್ರಿಸ್ತ ಯೇಸುವಿನ ಮಹಿಮೆಗೆ ಕಾರಣಸ್ಥರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು