Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:8 - ಕನ್ನಡ ಸಮಕಾಲಿಕ ಅನುವಾದ

8 ಇದು ನಿಮಗೆ ನನ್ನ ಆಜ್ಞೆಯಲ್ಲ. ಆದರೆ ಇತರರಿಗೆ ನಿಮಗಿರುವ ಈ ಸೇವಾಕಾರ್ಯದ ಉತ್ಸಾಹವನ್ನೂ ನಮ್ಮ ಮೇಲಿರುವ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾಗಿದೆಯೆಂಬುದನ್ನೂ ಹೋಲಿಕೆಮಾಡಿ ಪರೀಕ್ಷಿಸಿನೋಡಲು ಬಯಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದನ್ನು ಆಜ್ಞಾರೂಪವಾಗಿ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯೂ ಯಥಾರ್ಥವಾದದ್ದೆಂಬದನ್ನು ಪರೀಕ್ಷೆಯಿಂದ ತಿಳಿದುಕೊಳ್ಳಬೇಕೆಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆ ಮಿಯಾ ಸಾಂಗಟಲ್ಲೆ ಎಕ್ ಹುಕುಮ್ ಮನುನ್ ತುಮಿ ಚಿಂತುನಕಾಶಿ, ದುಸ್ರ್ಯಾಂಚ್ಯಾ ಇಮೆಂದಿಚ್ಯಾ ವಿಶಯಾತ್ ಬೊಲುನ್ ತುಮ್ಚೊ ಪ್ರೆಮ್‍ಬಿ ತಸ್ಲೊಚ್ ಮನುನ್ ದಾಕ್ವುನ್ ದಿವ್ಚೆ, ಮನ್ತಲೊಚ್ ಮಾಜೊ ಉದ್ದೆಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:8
19 ತಿಳಿವುಗಳ ಹೋಲಿಕೆ  

ಹೀಗೆ ನಾನು ಹೇಳುವುದು ಸಲಹೆಯೇ ಹೊರತು ಆಜ್ಞೆಯಲ್ಲ.


ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.


ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.


ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ.


ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.


ಆದ್ದರಿಂದ, ಇವರೊಂದಿಗೆ ನಿಮಗಿರುವ ಪ್ರೀತಿಯನ್ನೂ ನಿಮ್ಮ ಬಗ್ಗೆಯಿರುವ ನಮ್ಮ ಹೊಗಳಿಕೆಯನ್ನೂ ಸಭೆಗಳವರ ಮುಂದೆ ರುಜುಪಡಿಸಿ ತೋರಿಸಿರಿ.


ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ, ಕಳೆದ ವರ್ಷದಲ್ಲಿ ಮೊದಲು ನೀವೇ ಈ ಕಾರ್ಯವನ್ನು ಪ್ರಾರಂಭಿಸಿದ್ದಲ್ಲದೇ ಇದನ್ನು ಮಾಡಬೇಕೆಂದು ಬಯಸಿದ್ದೀರಿ.


ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.


ಉಳಿದವರಿಗೆ ಕರ್ತ ದೇವರಿಂದ ಮಾತು ಇಲ್ಲವಾದರೂ ನಾನು ಹೇಳುವುದೇನೆಂದರೆ: ಒಬ್ಬ ಸಹೋದರನಿಗೆ ಕ್ರೈಸ್ತ ವಿಶ್ವಾಸಿಯಲ್ಲದ ಹೆಂಡತಿಯಿರಲಾಗಿ, ಆಕೆ ಅವನೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಅವನು ಆಕೆಯನ್ನು ಬಿಡದಿರಲಿ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು